ಲಕ್ನೋ: ಉತ್ತರ ಪ್ರದೇಶದ (Uttar Pradesh) ಪ್ರಯಾಗ್‌ರಾಜ್‌ನಲ್ಲಿ (Prayagraj) ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ (Maha Kumbh Mela) ಪವಿತ್ರ ಬಸಂತ ಪಂಚಮಿ ಹಿನ್ನೆಲೆ ಸೋಮವಾರ ಕನಿಷ್ಠ ಮೂರು ಕೋಟಿ ಜನರು ಪವಿತ್ರ ಸ್ನಾನ ಮಾಡುವ ನಿರೀಕ್ಷೆಯಿದೆ.
ಬಸಂತ ಪಂಚಮಿ (Basant Panchami) ಹಿನ್ನೆಲೆ ಪ್ರಯಾಗ್‌ರಾಜ್‌ನಲ್ಲಿ ಮೂರನೇ ಅಮೃತ ಸ್ನಾನಕ್ಕೆ ಸಕಲ ಸಿದ್ಧತೆ ನಡೆದಿದೆ. ಮೌನಿ ಅಮಾವಾಸ್ಯೆಯಂದು ಮಹಾ ಕುಂಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಮಂದಿ ಸಾವನ್ನಪ್ಪಿದ್ದು, 90ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದ ಹಿನ್ನೆಲೆ ಸೋಮವಾರ ನಡೆಯುವ ಅಮೃತ ಸ್ನಾನದ ಮೇಲೆ ಹದ್ದಿನ ಕಣ್ಣು ಇರಿಸಲಾಗಿದೆ. ತ್ರಿವೇಣಿ ಸಂಗಮದ ಘಾಟ್‌ಗಳ ಮೇಲೆ ನಿಗಾ ವಹಿಸಿರುವ ಪೊಲೀಸರು ಯಾವುದೇ ಅವಘಡಗಳಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಇದನ್ನೂ ಓದಿ: ಕಾಲ್ತುಳಿತ ಪ್ರಕರಣ – ಮರಣೋತ್ತರ ಪರೀಕ್ಷೆ ನಡೆಸದೇ ಯುಪಿ ಸರ್ಕಾರದಿಂದ ಡೆತ್ ಸರ್ಟಿಫಿಕೇಟ್
ಮಹಾಕುಂಭದ ಎಲ್ಲಾ 25 ಸೆಕ್ಟರ್‌ಗಳು ಹಾಗೂ 30 ಪಾಂಟೂನ್ ಸೇತುವೆಗಳು ಮತ್ತು ಪ್ರಮುಖ ಬ್ಯಾರಿಕೇಡ್ ವಲಯಗಳ ಮೇಲ್ವಿಚಾರಣೆ ನಡೆಸಲಾಗಿದೆ. ಕಂಟ್ರೋಲ್ ರೂಂ ಮೂಲಕ ಕುಂಭ ಕಮಾಂಡ್ ತಂಡದಿಂದ ಮೇಲ್ವಿಚಾರಣೆ ನಡೆಸಲಾಗಿದೆ. 3,000ಕ್ಕೂ ಅಧಿಕ ಕ್ಯಾಮೆರಾ ಮೂಲಕ ನಿಗಾ ಇರಿಸಲಾಗಿದೆ. ಸ್ನಾನದ ನಂತರ ಘಾಟ್‌ಗಳಲ್ಲಿ ಕಾಲಹರಣ ಮಾಡದಂತೆ, ಊಟೋಪಚಾರ ಮಾಡದಂತೆ ಸರ್ಕಾರದಿಂದ ಮನವಿ ಮಾಡಲಾಗಿದೆ. ಸ್ನಾನದ ಬಳಿಕ ಘಾಟ್‌ನಿಂದ ನಿರ್ಗಮಿಸಿ ಗೊತ್ತುಪಡಿಸಿದ ಸ್ಥಳಗಳಲ್ಲಿ ಊಟೊಪಚಾರಕ್ಕೆ ಸಲಹೆ ನೀಡಲಾಗಿದೆ. ಇದನ್ನೂ ಓದಿ: ಭಾರತಕ್ಕೆ ರನ್‌ಗಳ ʻಅಭಿಷೇಕʼ – ಇಂಗ್ಲೆಂಡ್ ವಿರುದ್ಧ 4-1 ಅಂತರದಲ್ಲಿ ಸರಣಿ ಜಯ
ಈಗಾಗಲೇ ಮುನ್ನಚ್ಚರಿಕೆ ಕ್ರಮಗಳ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಸಭೆ ನಡೆಸಿದ್ದಾರೆ. ಈ ಹಿಂದೆ ಯಶಸ್ವಿ ಕುಂಭಮೇಳ ನಿಭಾಯಿಸಿದ್ದ ಇಬ್ಬರು ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದೆ. ಇದನ್ನೂ ಓದಿ: ಕೇರಳಕ್ಕೆ ಅನುದಾನ ಬೇಕಿದ್ರೆ ʻ ಹಿಂದುಳಿದ ರಾಜ್ಯʼ ಎಂದು ಘೋಷಿಸಲಿ: ಜಾರ್ಜ್ ಕುರಿಯನ್