ಬೆಳಗಾವಿ: ಇಂದು ಮಾಜಿ ಮಂತ್ರಿ ವಿನಯ್ ಕುಲಕರ್ಣಿ ಅವರ ಬಿಡುಗಡೆ ಹಿನ್ನೆಲೆ ಕೇಳಿದ ಪ್ರಶ್ನೆಗೆ ಉತ್ತರಿಸಲು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನಿರಾಕರಿಸಿದ್ದಾರೆ.
Advertisement
ಶನಿವಾರ ಬೆಳಗಾವಿಯಲ್ಲಿ ಪಂಚಮಸಾಲಿ ಲಿಂಗಾಯತರಿಗೆ ಪ್ರವರ್ಗ 2 ರಲ್ಲಿ ಮೀಸಲಾತಿ ನೀಡಲು ಸರ್ಕಾರ ಕೇಳಿರುವ ಸಮಯಾವಕಾಶದ ವೇಳೆ ಸರ್ಕಾರ ಗಮನ ಸೆಳೆಯಲು ಸಭೆಯನ್ನು ಕರೆಯಲಾಗಿತ್ತು. ಈ ವೇಳೆ ಸಮಾಜ ಸಭೆಯಲ್ಲಿ ವಿನಯ್ ಕುಲಕರ್ಣಿ ಕುರಿತು ಮಾತನಾಡುವುದು ಸೂಕ್ತವಲ್ಲ ಎಂದಿದ್ದಾರೆ. ಇದನ್ನೂ ಓದಿ:ಜೈಲಿಗೆ ಬಂದು ಸಾಕಷ್ಟು ಓದುವುದನ್ನು ಕಲಿತೆ, ಇದು ನನ್ನ ಜೀವನದಲ್ಲಿ ಅತೀ ದೊಡ್ಡ ಬದಲಾವಣೆ: ವಿನಯ್ ಕುಲಕರ್ಣಿ
Advertisement
Advertisement
ಪಂಚಮಸಾಲಿ ಲಿಂಗಾಯತರಿಗೆ ಪ್ರವರ್ಗ 2 ರಲ್ಲಿ ಮೀಸಲಾತಿ ನೀಡಲು ಸರ್ಕಾರ ಸೆಪ್ಟೆಂಬರ್ 15ರವರೆಗೆ ಕಾಲಾವಕಾಶವನ್ನು ಕೇಳಿದೆ. ಆದ್ದರಿಂದ ಸರ್ಕಾರಕ್ಕೆ ನಮ್ಮ ವಿಚಾರವನ್ನು ಮನದಟ್ಟಾಗಿಸುವ ಉದ್ದೇಶದಿಂದ ಆಗಸ್ಟ್ 26ರಿಂದ ಅಕ್ಟೋಬರ್ ಒಂದರವರೆಗೂ ರಾಜ್ಯ ಮಟ್ಟದ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಚಾಮರಾಜನಗರದ ಮಲೆ ಮಹಾದೇಶ್ವರ ಬೆಟ್ಟದಿಂದ ಈ ಪಂಚಮಸಾಲಿ ಪತ್ರಿಜ್ಞಾ ಪಂಚಾಯತಿ ಎಂಬ ಅಭಿಯಾನ ಆರಂಭಗೊಳ್ಳಲಿದೆ. ಇದರಲ್ಲಿ ಗೌಡ ಲಿಂಗಾಯತರು, ದೀಕ್ಷ ಲಿಂಗಾಯತರು, ಪಂಚಮಸಾಲಿ ಲಿಂಗಾಯತರು ಭಾಗಿಯಾಗಲಿದ್ದಾರೆ. ಈ ಅಭಿಯಾನ ಎಲ್ಲೆಡೆ ಸಂಚರಿಸಿ ಜಾಗೃತಿ ಮೂಡಿಸಲಿದೆ ಎಂದು ನುಡಿದಿದ್ದಾರೆ.
Advertisement
ಈ ಅವಧಿಯಲ್ಲಿಯೇ ಸರ್ಕಾರ ಪ್ರವರ್ಗ 2 ರಲ್ಲಿ ಮೀಸಲಾತಿಯ ಭರವಸೆಯನ್ನು ಈಡೇರಿಸಬೇಕಾಗಿದೆ. ಈಗಾಗಲೇ ಸಿಎಂ ಬೊಮ್ಮಾಯಿ ನಮ್ಮನ್ನ ಭೇಟಿಯಾಗಿದ್ದು, ಕಾಲಾವಕಾಶ ಕೇಳಿದ್ದಾರೆ. ಸಮಾಜಕ್ಕೆ ನ್ಯಾಯ ದೊರಕಿಸಿ ಕೊಡುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ. ಜೊತೆಗೆ ಪಂಚಮಸಾಲಿ ಲಿಂಗಾಯತರನ್ನು ಬೇರೆ-ಬೇರೆ ಹೆಸರುಗಳಿಂದ ಕರೆಯುತ್ತಾರೆ ಅವರೆಲ್ಲರನ್ನು ಒಗ್ಗೂಡಿಸಿ ಹಕ್ಕೋತ್ತಾಯ ಮಂಡಿಸಲೆಂದೇ ಮಲೆ ಮಹಾದೇಶ್ವರ ಬೆಟ್ಟದಿಂದ ಅಭಿಯಾನವನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಪಿಕ್ಚರ್ ಅಭೀ ಬಾಕಿ ಹೈ ಎಂದ ಆನಂದ್ ಸಿಂಗ್‍ಗೆ ಥಿಯೇಟರ್ ಬಂದ್ ಹೈ ಎಂದ ರಾಜೂ ಗೌಡ