ಬೆಳಗಾವಿ: ಮಡಿವಾಳೇಶ್ವರ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.
ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ
ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಆರೋಪದ ಬಳಿಕ ಇಬ್ಬರು ಮಹಿಳೆಯರ ಫೋನ್ಕಾಲ್ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.