– ಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ನಿರ್ಮಾಣಕ್ಕೆ ಆಗ್ರಹ
ಬೀದರ್: ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಅಂತ ಮುದ್ರೆ ಒತ್ತಿದ ಏಕೈಕ ವೀರ, ಧೀರ, ಶರಣ ಯಾರಾದರೂ ಇದ್ದರೆ, ಅದು ಸಿದ್ದರಾಮಯ್ಯ (Siddaramaiah) ಎಂದು ಭಾಲ್ಕಿ ಹೀರೆಮಠ ಸಂಸ್ಥಾನದ ಪೀಠಾಧಿಪತಿ ಬಸವಲಿಂಗ ಪಟ್ಟದೇವರು (Basavalinga Pattadevaru) ಶ್ಲಾಘಿಸಿದ್ದಾರೆ.
ಕನ್ನಡದ ಸಾಂಸ್ಕೃತಿಕ ನಾಯಕ ಎಂದು ವಿಶ್ವಗುರು ಬಸವಣ್ಣನನ್ನು (Basavanna) ಸರ್ಕಾರ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಬಸವಣ್ಣನ ಕರ್ಮಭೂಮಿ ಕಲ್ಯಾಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಲಾಯಿತು. ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ, ಅಖಿಲ ಭಾರತೀಯ ವೀರಶೈವ – ಲಿಂಗಾಯತ ಮಹಾಸಭಾ ಹಾಗೂ ವಿವಿಧ ಮಠಾಧಿಪತಿಗಳ ಒಕ್ಕೂಟದಿಂದ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯಗೆ ವಿಶೇಷ ಸನ್ಮಾನ ಮಾಡಿ ಅಭಿನಂದನೆ ಸಲ್ಲಿಸಲಾಯಿತು.
Advertisement
Advertisement
ಬಸವಲಿಂಗ ಪಟ್ಟದ್ದೆವರು, ಮೃತ್ಯುಂಜಯ ಸ್ವಾಮೀಜಿ, ಕೂಡಲಸಂಗಮ ಮಾತೆ, ಹಾರಕೂಡ್ ಶ್ರೀಗಳು, ತಡೋಳ್ ಶ್ರೀಗಳು, ಸಚಿವರಾದ ಎಂ.ಬಿ ಪಾಟೀಲ್ (MB Patil), ಈಶ್ವರ್ ಖಂಡ್ರೆ, ರಹೀಂ ಖಾನ್, ಶಾಮನೂರು ಶಿವಶಂಕರಪ್ಪ ಅವರು ಸಿಎಂಗೆ ಪುಷ್ಪಾರ್ಚನೆ ಸಲ್ಲಿಸಿದರು. ಬಸವಕಲ್ಯಾಣ ತೇರು ಮೈದಾನದಲ್ಲಿ ಸಿಎಂ ಅಭಿನಂದನಾ ಸಮಾರಂಭ ನಡೆಯಿತು. ವಿವಿಧ ಮಠಾಧೀಶರು, ಕಾಂಗ್ರೆಸ್ ಮುಖಂಡರು, ಬಸವಣ್ಣನ ಅನುಯಾಯಿಗಳು ಸಮಾರಂಭದಲ್ಲಿ ಭಾಗಿಯಾಗಿದ್ದರು.
Advertisement
Advertisement
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕಲ್ಯಾಣದಲ್ಲಿ ಭಾಲ್ಕಿ ಹೀರೆಮಠ ಸಂಸ್ಥಾನದ ಪೀಠಾಧಿಪತಿ ಬಸವಲಿಂಗ ಪಟ್ಟದೇವರು ಅವರು, ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಅಂತ ಮುದ್ರೆ ಒತ್ತಿದ ಏಕೈಕ ವೀರ, ಧೀರ, ಶರಣ ಯಾರಾದರೂ ಇದ್ದರೆ, ಅದು ಸಿದ್ದರಾಮಯ್ಯ. ಬಸವಣ್ಣ ಸಾಂಸ್ಕೃತಿಕ ನಾಯಕ ಘೋಷಣೆ ಮಾಡಿದರವರು ಸಿಎಂ ಸಿದ್ದರಾಮಯ್ಯ ಎಂದು ಹಾಡಿಹೊಗಳಿದರು. ಇದನ್ನೂ ಓದಿ: ದೇಶದಲ್ಲೇ ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತ ರಾಜ್ಯ: ಮಮತಾ ಬ್ಯಾನರ್ಜಿ
ಇದೇ ಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ನಿರ್ಮಾಣ ಮಾಡಬೇಕು, ಅನುಭವ ಮಂಟಪಕ್ಕೆ ಜೀವಂತಿಕೆ ತುಂಬಲು ವಚನ ವಿಶ್ವವಿದ್ಯಾಲಯ ಬೇಕೆ ಬೇಕು ಎಂದು ಆಗ್ರಹಿಸಿದರು.
ಅಭಿನಂದನಾ ಸಮಾರಂಭವಾದ ಬಳಿಕ ದಾಸೋಹ ಭವನ ಉದ್ಘಾಟನೆ ಮಾಡಿದ ಸಿದ್ದರಾಮಯ್ಯ, ಬಳಿಕ ನೂತನ ಅನುಭವ ಮಂಟಪ ಕಾಮಗಾರಿ ವೀಕ್ಷಣೆ ಮಾಡಿ ಕಾಲ ಮಿತಿಯಲ್ಲಿ ಕಾಮಗಾರಿ ಮುಗಿಸುವಂತ್ತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೇಸ್; ಪರಪ್ಪನ ಅಗ್ರಹಾರ ಜೈಲು ಸೇರಿದ ನಾಶೀಪುಡಿ