ರಾಮನಗರ: ಬಂಡೇಮಠದ ಬಸವಲಿಂಗ ಸ್ವಾಮೀಜಿ (BasavalingaSwamiji) ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನೀಲಾಂಬಿಕೆ (Nilambike), ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ವಕೀಲ ಮಹದೇವಯ್ಯ ಹಾಗೂ ಸುರೇಶ್ ಎಂಬುವರ ಜಾಮೀನು ಅರ್ಜಿ ಮತ್ತೊಮ್ಮೆ ವಜಾ ಆಗಿದೆ.
ಆರೋಪಿಗಳು ಕೆಲ ದಿನಗಳ ಹಿಂದೆ ಮಾಗಡಿ (Magadi) ತಾಲೂಕು ನ್ಯಾಯಾಲಯದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಲ್ಲಿ ಅವರ ಅರ್ಜಿ ವಜಾ ಆಗಿದ್ದರಿಂದ ಜಿಲ್ಲಾ ನ್ಯಾಯಾಲಯದ ಮೊರೆ ಹೋಗಿದ್ದರು. ಇಂದು ನಾಲ್ವರು ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ಮಾಡಿದ ರಾಮನಗರ ಜಿಲ್ಲಾ ನ್ಯಾಯಾಲಯದ ನ್ಯಾಯಪೀಠವು ವಾದ-ಪ್ರತಿವಾದಗಳನ್ನು ಆಲಿಸಿತು. ಇದನ್ನೂ ಓದಿ: ಸಿದ್ದರಾಮಯ್ಯ ಯಾವತ್ತು ಕೂಡ ಸತ್ಯ ಒಪ್ಪಿಕೊಳ್ಳಲ್ಲ : ಆರಗ ಜ್ಞಾನೇಂದ್ರ
Advertisement
Advertisement
ನ್ಯಾಯಾಧೀಶ ಗುಲ್ಜಾರ್ ಲಾಲ್ ಡಿ ಮಹಾವರ್ಕರ್ ಅವರು ನಾಲ್ಕೂ ಅರ್ಜಿಗಳನ್ನು ತಿರಸ್ಕರಿಸಿ ಆದೇಶ ನೀಡಿದರು. ಅ. 24ರಂದು ಬಸವಲಿಂಗ ಸ್ವಾಮೀಜಿಯವರ ಶವ ಮಠದಲ್ಲಿರುವ ಅವರ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ಕರ್ನಾಟಕ ಚುನಾವಣೆ ಗೆಲ್ಲಲು ಬಿಜೆಪಿಯೇ ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡ್ತಿದೆ: ಉದ್ಧವ್ ಠಾಕ್ರೆ