ಬೆಂಗಳೂರು: ಬಂಡೇಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಡೆತ್ ನೋಟ್ ಪತ್ತೆಯಾಗಿದೆ.
Advertisement
ಮೂರು ಪುಟಗಳ ಡೆತ್ ನೋಟ್ (Death Note) ಬರೆದಿದ್ದು, ಅದರಲ್ಲಿ ಕಳೆದ ಆರು ತಿಂಗಳಿನಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ!
Advertisement
Advertisement
ಶತ್ರುಗಳಿಂದ ಸಾಕಷ್ಟು ಖಿನ್ನತೆಗೆ ಒಳಗಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅದನ್ನ ತಡೆಯಲು ಸಾಧ್ಯವಾಗದೆ ಆತ್ಮಹತ್ಯೆಗೆ ದಾರಿ ಎಂದು ಉಲ್ಲೇಖಿಸಲಾಗಿದೆ. ಅಲ್ಲದೆ ಯಾರು ಯಾರು ಎಂದು ಶತ್ರುಗಳು ಎಂದು ಹೆಸರು ಉಲ್ಲೇಖ ಮಾಡಿದ್ದಾರೆ. ಸದ್ಯ ಡೆತ್ ನೋಟ್ ಕುದೂರು ಪೊಲೀಸರ ಕೈ ಸೇರಿದೆ. ಪೊಲೀಸರ ತನಿಖೆ ನಂತರ ಡೆತ್ ನೋಟ್ ರಹಸ್ಯ ಬಹಿರಂಗವಾಗಲಿದೆ.
Advertisement
ಕಳೆದ ರಾತ್ರಿ ಬಂಡೇಮಠದ ಬೆಟ್ಟದ ಮೇಲಿನ ವಿಶ್ರಾಂತಿ ನಿಲಯದಲ್ಲಿ ಮೂರು ಪುಟಗಳ ಡೆತ್ ನೋಟ್ ಬರೆದು ನಂತರ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಂಡೇಮಠದ ಆವರಣದಲ್ಲಿ ಮಧ್ಯಾಹ್ನ 3:30 ನಂತರ ಅಂತ್ಯಸಂಸ್ಕಾರದ ಗದ್ದುಗೆ ನಿರ್ಮಾಣ ಮಾಡಲಾಗುತ್ತಿದೆ.