ಬೆಂಗಳೂರು: ಬಂಡೇಮಠದ ಬಸವಲಿಂಗ ಸ್ವಾಮೀಜಿ (Basavalinga Swamiji) (56) ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇಮಠ ಸ್ವಾಮೀಜಿಯ ಆತ್ಮಹತ್ಯೆ (Suicide) ಪ್ರಕರಣ ಇದೀಗ ತೀವ್ರ ಅನುಮಾನ ಹುಟ್ಟಿಸಿದೆ. ಇದನ್ನೂ ಓದಿ: ಪೊಲೀಸರ ಮನೆಗೇ ಕನ್ನ ಹಾಕಿದ ಕಳ್ಳರು – ಚಿನ್ನ, ಹಣ, ಪೆಟ್ರೋಲ್ ಕಳ್ಳತನ
ಸ್ವಾಮೀಜಿ ಬಂಡೇಮಠದ ಬೆಟ್ಟದ ಮೇಲಿನ ಮನೆಯ ಕಿಟಕಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಮೂರು ತಿಂಗಳ ಹಿಂದೆ ಕಡಲೆ ಮಠದ ಸ್ವಾಮೀಜಿ ಕೂಡ ಇದೇ ರೀತಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ರು. ಇದೀಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂದು ತಿಳಿದುಬಂದಿಲ್ಲ.