ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಯಂದು (Makar Sankranti) ಬಸವನಗುಡಿಯ (Basavanagudi) ಗವಿಗಂಗಾಧರೇಶ್ವರ ದೇವಾಲಯದಲ್ಲಿ (Gavigangadhareshwara Temple) ಸೂರ್ಯ ರಶ್ಮಿ ದೇವಾಲಯದ ಗರ್ಭಗುಡಿ ಪ್ರವೇಶಿಸಿದ್ದು, ಈ ವಿಸ್ಮಯ ಕ್ಷಣವನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಪ್ರತಿ ವರ್ಷ ಸಂಕ್ರಾಂತಿಯಂದು ನಡೆಯುವ ಪ್ರಕೃತಿಯ ಈ ವಿಸ್ಮಯವನ್ನು ನೋಡಲು ಭಕ್ತ ಸಾಗರವೇ ನೆರೆದಿರುತ್ತದೆ. ಸೂರ್ಯ ರಶ್ಮಿ ಸಂಜೆ 4.58ಕ್ಕೆ ಗರ್ಭಗುಡಿಯ ನಂದಿಯ ಬೆನ್ನಿನ ಭಾಗವನ್ನು ಸ್ಪರ್ಶಿಸಿದ್ದು, ಬಳಿಕ ನಂದಿಯ ಕೊಂಬುಗಳ ಮಧ್ಯೆ ಹಾದು ಲಿಂಗವನ್ನು ತಲುಪಿದೆ. ಸೂರ್ಯ ರಶ್ಮಿ ಗರ್ಭಗುಡಿ ಪ್ರವೇಶಿಸುತ್ತಲೇ ಗಂಗಾಧರನಿಗೆ ದೀಪಾರಾಧನೆ ಪ್ರಾರಂಭವಾಗಿದೆ.
ಇದು 30-40 ಸೆಕೆಂಡುಗಳ ಕಾಲ ಮಾತ್ರವೇ ಕಾಣಿಸಿಕೊಳ್ಳುವ ವಿಸ್ಮಯವಾಗಿದೆ. ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸೂರ್ಯ ತನ್ನ ಪಥ ಬದಲಾಯಿಸುತ್ತಿದ್ದಂತೆ ಗವಿಗಂಗಾಧರೇಶ್ವರನ ಮೇಲೆ ಸೂರ್ಯನ ಕಿರಣಗಳು ಬೀಳುತ್ತದೆ. ಇದನ್ನೂ ಓದಿ: ಯೋಗದಲ್ಲಿ ಕರ್ನಾಟಕ ಗಿನ್ನಿಸ್ ದಾಖಲೆ – ಏಕಕಾಲಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಯೋಗಾಭ್ಯಾಸ
ಈ ವಿಸ್ಮಯ ಕಣ್ತುಂಬಿಸಿಕೊಳ್ಳಲು ದೇವಸ್ಥಾನದ ಹೊರ ಭಾಗದಲ್ಲಿ ಎಲ್‌ಇಡಿ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ದೇವಸ್ಥಾನದ ಆವರಣದಲ್ಲಿ ಭಕ್ತರಿಗಾಗಿ ಟೆಂಟ್, ಶಾಮಿಯಾನದ ವ್ಯವಸ್ಥೆಯನ್ನೂ ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಈ ತಿಂಗಳಾಂತ್ಯಕ್ಕೆ ಮತ್ತೆ ಅಮಿತ್ ಶಾ ಎಂಟ್ರಿ – ಸಂಕ್ರಾಂತಿ ಬಳಿಕ ಕ್ರಾಂತಿಗೆ ವೇದಿಕೆ ಸಿದ್ಧ?
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k