ಬೆಂಗಳೂರು: ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ (Basavanagudi Kadlekai Parishe) ದಿನಾಂಕ ನಿಗದಿ ಆಗಿದೆ. ಮುಂದಿನ ತಿಂಗಳು ನವೆಂಬರ್ 17 ಮತ್ತು 18ರಂದು ಎರಡು ದಿನಗಳ ಕಾಲ ಪರಿಷೆ ನಡೆಯಲಿದೆ.
ಶ್ರೀ ದೊಡ್ಡಗಣಪತಿ ದೇವಾಲಯದಲ್ಲಿ ನಡೆಯುವ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ತನ್ನದೇ ಆದ ವಿಶೇಷ ಇತಿಹಾಸ ಇದೆ. ಪ್ರತಿ ವರ್ಷದಂತೆ ಈ ವರ್ಷವು ಯಾವುದೇ ಅಹಿತಕರ ಘಟನೆ ಆಗದಂತೆ ಅದ್ಧೂರಿ ಆಗಿ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಗೋಲ್ಡನ್ ಪಾಸ್ ಪಡೆದು, ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದ ಧ್ರುವ ಸರ್ಜಾ
ಇದೇ ಗುರುವಾರ ಕಡಲೆ ಕಾಯಿ ಪರಿಷೆ ಸಂಬಂಧ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ (Ramalinga Reddy) ನೇತೃತ್ವದಲ್ಲಿ ಸಭೆ ಕೂಡ ನಡೆಯಲಿದ್ದು, ಸಭೆಯಲ್ಲಿ ಸ್ಥಳೀಯ ಶಾಸಕರು ಭಾಗಿಯಾಗಲಿದ್ದಾರೆ. ಜೊತೆಗೆ ವ್ಯಾಪಾರಿಗಳಿಂದ ಯಾವುದೇ ಸುಂಕ ವಸೂಲಾತಿ ಯಾರು ಮಾಡಬಾರದು ಎಂಬುದುನ್ನ ನಿರ್ಧಾರ ಕೈಗೊಳ್ಳುವುದರ ಜೊತೆಗೆ ಏನೆಲ್ಲ ವಿಶೇಷತೆ ಇರುತ್ತೆ ಎಂಬುದನ್ನ ಬಹಿರಂಗ ಪಡಿಸಲಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ಆಮದು ಕಡಿಮೆಯಾಗಲಿದೆ, ದೀಪಾವಳಿಯಂದು ಮೋದಿ ಜೊತೆ ಮಾತನಾಡಿದ್ದೇನೆ: ಟ್ರಂಪ್