ಬೆಂಗಳೂರು: ಅತಿಥಿ ಶಿಕ್ಷಕರಿಗೆ ಸರ್ಕಾರ ಗುಡ್ ನ್ಯೂಸ್ ಒಂದನ್ನು ಕೊಟ್ಟಿದೆ. ಅತಿಥಿ ಶಿಕ್ಷಕರ ಗೌರವ ಧನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.
ಈ ಹಿಂದೆ ಸಂಭಾವನೆ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಈ ಪರಿಷ್ಕರಣೆಯ ಮನವಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಆದೇಶಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಟ್ವೀಟ್ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
Advertisement
ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಮಾಸಿಕ ಗೌರವ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿ ₹2,500 ಹೆಚ್ಚಳ ಮಾಡಿರುವ ಮುಖ್ಯಮಂತ್ರಿ @BSBommai ಅವರಿಗೆ ಧನ್ಯವಾದಗಳು ????
ಅತಿಥಿ ಶಿಕ್ಷಕರ ಪರಿಷ್ಕೃತ ಗೌರವ ಸಂಭಾವನೆ:
✅ಪ್ರೌಢಶಾಲೆ ಶಿಕ್ಷಕರು: ₹8,000 ರಿಂದ ₹10,500.
✅ಪ್ರಾಥಮಿಕ ಶಾಲಾ ಶಿಕ್ಷಕರು: ₹7,500 ರಿಂದ ₹10,000. pic.twitter.com/9fNaqWFrOU
— B.C Nagesh (@BCNagesh_bjp) June 29, 2022
Advertisement
ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು 2,500 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಪರಿಷ್ಕರಣೆಯ ಮನವಿಗೆ ಸ್ಪಂದಿಸಿ 2,500 ರೂಪಾಯಿಗೆ ಹೆಚ್ಚಳ ಮಾಡಿರುವ ಸಿಎಂಗೆ ಅಭಿನಂದನೆ ಎಂದು ಬಿ.ಸಿ ನಾಗೇಶ್ ಟ್ವಿಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಾಲೇಜಿನಲ್ಲಿ ಪಿಯು ಓದುವ ವಿದ್ಯಾರ್ಥಿನಿಯರಿಗೆ ಗುಡ್‌ನ್ಯೂಸ್ – ಯಾವುದೇ ಫೀಸ್ ಕಟ್ಟುವ ಅಗತ್ಯವಿಲ್ಲ
Advertisement
ಪ್ರಾಥಮಿಕ ಶಿಕ್ಷಕರಿಗೆ ಪ್ರಸ್ತುತ 7,500 ರೂ.ಗಳಿದ್ದು, ಅದನ್ನು 10,000 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಇನ್ನೂ ಸರ್ಕಾರಿ ಪ್ರೌಢ ಶಾಲೆಗಳ ಶಿಕ್ಷಕರಿಗೆ ಪ್ರಸ್ತುತ 8,000 ರೂ. ಇದ್ದು, 10,500 ರೂ.ಗೆ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ.