ಬೆಂಗಳೂರು: ಅಯೋಧ್ಯೆ ಯಾತ್ರೆಗೆ ತೆರಳುತ್ತಿದ್ದ ಬೀದರ್ ಜಿಲ್ಲೆಯ ಪ್ರವಾಸಿಗರ ತಂಡದ ಮಿನಿ ಬಸ್ (ಖಿಖಿ) ಉತ್ತರ ಪ್ರದೇಶದ ಲಖೀಂಪುರ್ ಖೇರಿ ಬಳಿ ಅಪಘಾತ ಸಂಭವಿಸಿ ಒಂದೇ ಕುಟುಂಬದ 7 ಜನರು ಮೃತಪಟ್ಟು 9 ಜನರು ಗಾಯಗೊಂಡಿರುವ ಘಟನೆ ಅತ್ಯಂತ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪುಣ್ಯಭೂಮಿ ಅಯೋಧ್ಯೆಗೆ ತೆರಳುತ್ತಿದ್ದ ಬೀದರನ ಪ್ರವಾಸಿಗರ ತಂಡದ ಬಸ್ ಉತ್ತರಪ್ರದೇಶದ ಲಖೀಂಪುರಖೇರಿ ಬಳಿ ಭೀಕರ ಅಪಘಾತಕ್ಕೆ ಒಳಗಾಗಿ ಒಂದೇ ಕುಟುಂಬದ 7 ಜನ ಅಸುನೀಗಿ, 9ಜನ ಗಾಯಗೊಂಡಿರುವ ಸುದ್ದಿ ತಿಳಿದು ಅತ್ಯಂತ ದುಃಖಿತನಾಗಿದ್ದೇನೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ, ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
— Basavaraj S Bommai (@BSBommai) May 29, 2022
Advertisement
ಮೃತರ ಕುಟುಂಬಗಳಿಗೆ ಸಂತಾಪ ತಿಳಿಸಿರುವ ಮುಖ್ಯಮಂತ್ರಿಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಬಸ್- ಟ್ರಕ್ ಮುಖಾಮುಖಿ ಡಿಕ್ಕಿ- ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ 7 ಜನರ ದುರ್ಮರಣ
Advertisement
Advertisement
ಅಪಘಾತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ಭರದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ರಾಜ್ಯದ ಪ್ರವಾಸಿಗರ ಸುರಕ್ಷತೆ, ಅವರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುವ ಕುರಿತಂತೆ ಈಗಾಗಲೇ ತಾವು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Advertisement
ನಾನು ಈ ಕುರಿತು ಈಗಾಗಲೇ ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ @myogiadityanath ಹಾಗೂ ಸ್ಥಳೀಯ ಜಿಲ್ಲಾಧಿಕಾರಿಯೊಂದಿಗೆ ಮಾತಮಾಡಿದ್ದೇನೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲಾ ಸೂಕ್ತವ್ಯವಸ್ಥೆ ಮಾಡಲಾಗಿದೆ.
— Basavaraj S Bommai (@BSBommai) May 29, 2022
ಗಾಯಾಳುಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವ ಜೊತೆಗೆ ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.