ನವದೆಹಲಿ: ನಾನು ಜಲ ಸಂಪನ್ಮೂಲ ಖಾತೆಗೆ ಬೇಡಿಕೆ ಇಟ್ಟಿಲ್ಲ ಖಾತೆ ಹಂಚುವುದು ಸಿಎಂಗೆ ಬಿಟ್ಟ ವಿಚಾರ ಇದರಲ್ಲಿ ನಾನು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಕೆಲವೇ ದಿನಗಳಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದ್ದು ಜಲ ಸಂಪನ್ಮೂಲ ಖಾತಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮತ್ತು ಶಾಸಕ ರಮೇಶ್ ಜಾರಕಿಹೊಳಿ ನಡುವೆ ಹಗ್ಗ ಜಗ್ಗಾಟ ಶುರುವಾಗಿದೆ ಎನ್ನಲಾಗಿತ್ತು.
ಈ ಬಗ್ಗೆ ದೆಹಲಿಯಲ್ಲಿ ಸ್ಪಷ್ಟೀಕರಣ ನೀಡಿದ ಬೊಮ್ಮಾಯಿ ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರಿಲ್ಲ. ನಾನು ನೀರಾವರಿ ಖಾತೆಯೇ ಬೇಕೆಂದು ಕೇಳಿಲ್ಲ ಅಂಥ ಯಾವುದೇ ಚರ್ಚೆಗಳು ಆಗಿಲ್ಲ ಯಾವುದೇ ವಿಷಯದಲ್ಲಿ ನಾನು ಮಧ್ಯಪ್ರವೇಶ ಮಾಡಿಲ್ಲ ಯಾರಿಗೆ ಯಾವ ಖಾತೆ ಕೊಡಬೇಕೆಂಬುದು ಸಿಎಂ ಅಧಿಕಾರ ಅದು ಸಿಎಂ ವಿವೇಚನೆ ಬಿಟ್ಟಿದ್ದು ಎಂದರು.
ಹಣಕಾಸು ಸಚಿವರು ಸಭೆ ಹಿನ್ನೆಲೆ ದೆಹಲಿಗೆ ಆಗಮಿಸಿದ್ದೇನೆ. ಹೈದರಾಬಾದ್ ಕರ್ನಾಟಕ ಮತ್ತಿತರ ಹಿಂದುಳಿದ ಪ್ರದೇಶಗಳಿಗೆ ಹಾಗೂ ಬೆಂಗಳೂರಿಗೆ ಹೆಚ್ಚಿನ ಅನುದಾನ ಕೇಳುತ್ತೇವೆ. ಪೌಷ್ಟಿಕ ಆಹಾರ ಮತ್ತಿತರ ಯೋಜನೆಗಳಿಗೂ ಹೆಚ್ಚಿನ ಅನುದಾನ ಕೇಳಲಿದ್ದೇವೆ 2 ನೀರಾವರಿ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಕೇಳಲಿದ್ದೇವೆ ಪ್ರವಾಹ ಪರಿಹಾರಕ್ಕಾಗಿ ಇನ್ನೂ ಹೆಚ್ಚಿನ ಬೇಡಿಕೆ ಇಡಲಿದ್ದೇವೆ ಎಂದರು.
ಪೌರತ್ವ ಕಾಯಿದೆ ಸಂವಿಧಾನಿಕವಾಗಿ ಮಾಡಲೇಬೇಕಾದ ಕೆಲಸ ಪಾರ್ಲಿಮೆಂಟ್ ನಲ್ಲಿ ಪಾಸ್ ಆಗಿದ್ದು ರಾಷ್ಟ್ರಪತಿಗಳು ಸಹಿ ಹಾಕಿದ್ದಾರೆ. ಹಾಗಾಗಿ ರಾಜ್ಯದಲ್ಲಿ ನಿಯಮಗಳ ಪ್ರಕಾರ ನಾವು ಅನುಷ್ಠಾನ ಮಾಡಲಿದ್ದೇವೆ ಎಂದರು.