ಬೆಂಗಳೂರು: ಬಿಜೆಪಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಾವೋಸ್ ಪ್ರವಾಸ ಕೊನೆಗೂ ಫಿಕ್ಸ್ ಆಗಿದೆ.
Advertisement
ಇದೇ ಮೇ 22 ರ ಬೆಳಗ್ಗೆ ಸಿಎಂ ದಾವೋಸ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಸಿಎಂ ಬೊಮ್ಮಾಯಿ ಪಾಲ್ಗೊಳ್ಳಲಿದ್ದಾರೆ. ನಂತರ ಮೇ 26 ರಂದು ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: PSI ಪ್ರಕರಣದ ನಿಜವಾದ ಕಿಂಗ್‍ಪಿನ್‍ಗಳು ಬೆಂಗಳೂರಲ್ಲೇ ಇದ್ದಾರೆ, ಬಂಧಿತರೇ ಬೇರೆ: ಪ್ರಿಯಾಂಕ್ ಖರ್ಗೆ ಬಾಂಬ್
Advertisement
ಒಟ್ಟು ಐದು ದಿನಗಳ ಕಾಲ ವಿದೇಶ ಪ್ರವಾಸ ಮಾಡಲಿದ್ದಾರೆ. ಈ ವೇಳೆ ಸಿಎಂ ಜೊತೆಗೆ ದಾವೋಸ್‌ಗೆ ಇಬ್ಬರು ಸಚಿವರೂ ಪ್ರಯಾಣ ಬೆಳೆಸಲಿದ್ದಾರೆ. ಸಿಎಂ ಜೊತೆಗೆ ಐಟಿ ಬಿಟಿ ಸಚಿವ ಡಾ.ಅಶ್ವಥ್ ನಾರಾಯಣ ಮತ್ತು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಪ್ರವಾಸ ಕೈಗೊಳ್ಳಲಿದ್ದಾರೆ.
Advertisement
Advertisement
ಹಲವು ಕಾರಣಗಳಿಗಾಗಿ ಮುಖ್ಯಮಂತ್ರಿಗಳ ಲಂಡನ್ ಪ್ರವಾಸ ರದ್ದಾಗಿತ್ತು. ಇದರ ಬೆನ್ನಲ್ಲೇ ದಾವೋಸ್ ಪ್ರವಾಸವೂ ರದ್ದಾಗುವ ಸಾಧ್ಯತೆ ಇದೆ ಎಂದು ಸುದ್ದಿ ಹರಡಿತ್ತು. ಆದರೆ ದಾವೋಸ್ ಪ್ರವಾಸ ಕೊನೆಗೂ ಫಿಕ್ಸ್ ಆಗಿದೆ. ಇದನ್ನೂ ಓದಿ: ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಸಿಎಂ ನಿರ್ಧಾರಕ್ಕೆ ಬಿಟ್ಟಿದ್ದು: ಅರುಣ್ ಸಿಂಗ್