ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಬೆಳಗಾವಿ ಮೂಲದ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ನನ್ನ ಸಾವಿಗೆ ಸಚಿವ ಈಶ್ವರಪ್ಪ ಅವರೇ ಕಾರಣ ಎಂದು ಸಂತೋಷ್ ಪಾಟೀಲ್ ಡೆತ್‌ನೋಟ್ ಬರೆದಿಟ್ಟಿದ್ದಾರೆ. ಹೀಗಾಗಿ ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯುವ ಸಂಬಂಧ ಯಡಿಯೂರಪ್ಪ ಅವರೊಂದಿಗೆ ಸಿಎಂ ಬೊಮ್ಮಾಯಿ ಚರ್ಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಸಾಲ ಸೋಲ ಹೆಚ್ಚಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು: ಈಶ್ವರಪ್ಪ ಪರ ಯತ್ನಾಳ್ ಬ್ಯಾಟಿಂಗ್
Advertisement
ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು, ವಿಪಕ್ಷಗಳು ಸಹ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿವೆ.
Advertisement
Advertisement
ಕಳೆದೆರಡು ತಿಂಗಳಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ನಾಯಕರಿಗೆ ಸಾಲು ಸಾಲು ದೂರು ನೀಡಿದ್ದ ಗುತ್ತಿಗೆದಾರ ಸಂತೋಷ್ ಇದೀಗ ಸಾವಿಗೆ ಶರಣಾಗಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪ ಕಾರಣ ಎಂದು ನಿನ್ನೆ ರಾತ್ರಿ 11.30ಕ್ಕೆ ವಾಟ್ಸಪ್ ಮಾಡಿದ್ದ ಸಂತೋಷ್ ಪಾಟೀಲ್ ನಾಪತ್ತೆಯಾಗಿದ್ದರು. ಪೊಲೀಸರು ಮೊಬೈಲ್ ಟವರ್ ಮೂಲಕ ಪರಿಶೀಲನೆ ನಡೆಸಿದಾಗ ಸಂತೋಷ್ ಉಡುಪಿಯಲ್ಲಿರುವುದು ಗೊತ್ತಾಗಿತ್ತು. ಪರಿಶೀಲನೆ ವೇಳೆ ಶಾಂಭವಿ ಲಾಡ್ಜ್‌ನ ಕೊಠಡಿವೊಂದರಲ್ಲಿ ಸಂತೋಷ್ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ನನ್ನ ಗಂಡನ ಸಾವಿಗೆ ಈಶ್ವರಪ್ಪನೇ ಕಾರಣ: ಸಂತೋಷ್ ಪತ್ನಿ ಕಣ್ಣೀರು