ಬೆಂಗಳೂರು: ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಯಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು. ಬೊಮ್ಮಾಯಿ ಕುಟುಂಬಸ್ಥರು ಅಮಿತ್ ಶಾ ಅವರಿಗೆ ಮೈಸೂರು ಪೇಟ ತೊಡಿಸಿ, ಹೂವಿನ ಹಾರ ಹಾಕಿ ಸನ್ಮಾನಿಸಿದರು.
Advertisement
ಸಿಎಂ ಮನೆಗೆ ಭೇಟಿ ನೀಡಿದ ಅಮಿತ್ ಶಾಗೆ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಸನ್ಮಾನ ಮಾಡಿದರು. ಈ ವೇಳೆ ಸಿಎಂ ಪತ್ನಿ, ಪುತ್ರಿ ಹಾಗೂ ಸೊಸೆ ಕೂಡ ಉಪಸ್ಥಿತರಿದ್ದರು. ಇದನ್ನೂ ಓದಿ: ಗುಜರಾತ್, ಉತ್ತರಾಖಂಡ್, ಉತ್ತರ ಪ್ರದೇಶ: ಕರ್ನಾಟಕದಲ್ಲಿ ಯಾವ ಮಾಡೆಲ್?
Advertisement
ಅಮಿತ್ ಶಾರಿಗೆ ಸಿಎಂ ಬೊಮ್ಮಾಯಿ ನಿವಾಸದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರೊಟ್ಟಿಗೆ ಕುಳಿತು ಅಮಿತ್ ಶಾ ಅವರು ಬೆಳ್ಳಿ ತಟ್ಟೆಯಲ್ಲಿ ಭೋಜನ ಸವಿದರು.
Advertisement
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲೇ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರೂ ಕೂಡ ಹಾಜರಿದ್ದರು. ಭೋಜನ ನಂತರ ಸಿಎಂ ಮನೆಯಲ್ಲೇ ಅಮಿತ್ ಶಾ ಜೊತೆ ಪ್ರಮುಖರ ವಿಶೇಷ ಸಭೆ ಆಯೋಜಿಸಲಾಗಿದೆ. ಇದನ್ನೂ ಓದಿ: ಶೀಘ್ರವೇ ಕ್ಯಾಬಿನೆಟ್ ವಿಸ್ತರಣೆ: ಬಿಎಸ್‍ವೈ