ಬೆಂಗಳೂರು: ರಾಜ್ಯದ ಪ್ರಮುಖ ಉತ್ಸವಗಳಲ್ಲಿ ಒಂದಾಗಿರುವ ಹಂಪಿ ಉತ್ಸವವನ್ನು (Hampi Utsav 2023) ಅಚ್ಚುಕಟ್ಟಾಗಿ ವಿಜೃಂಭಣೆಯಿಂದ ಅಯೋಜಿಸುವಂತೆ ಉತ್ಸವದ ಲೋಗೋ (Logo) ಮತ್ತು ಪೋಸ್ಟರ್ (Poster) ಬಿಡುಗಡೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಶುಭ ಹಾರೈಸಿದರು.
Advertisement
ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ತಮ್ಮ ಕಚೇರಿಯಲ್ಲಿ ಹಂಪಿ ಉತ್ಸವದ ಲೋಗೋ ಮತ್ತು ಪೋಸ್ಟರ್ ಬಿಡುಗಡೆ ಮಾಡಿದ್ರು. ಬಳಿಕ ಮಾತನಾಡಿದ ಸಿಎಂ, ಜನವರಿ 27, 28 ಹಾಗೂ 29 ನಡೆಯಲಿರುವ ಹಂಪಿ ಉತ್ಸವ ರಾಜ್ಯದ ಪ್ರಮುಖ ಉತ್ಸವಗಳಲ್ಲಿ ಒಂದಾಗಿದೆ. ಈ ಉತ್ಸವವನ್ನು ಮೊದಲಿಂದಲೂ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕೋವಿಡ್ (Covid-19) ಕಾರಣದಿಂದ ಕಳೆದೆರಡು ವರ್ಷ ಸರಳವಾಗಿ ಆಚರಿಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ಮೂರು ದಿನಗಳ ಕಾಲ ಆ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಮೂರು ದಿನಗಳ ಉತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಮೈಸೂರಿನಲ್ಲಿ ಚಿರತೆ ದಾಳಿಗೆ 3ನೇ ಬಲಿ – ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನಾಕ್ರೋಶ
Advertisement
Advertisement
ಇದೇ ವೇಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಮಾತನಾಡಿ, ಉತ್ಸವವನ್ನು ಅಚ್ಚುಕಟ್ಟಾಗಿ ನೆರವೇರಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಅಗತ್ಯ ಸೂಚನೆಗಳನ್ನು ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಶನಿವಾರ ರಾಜ್ಯಕ್ಕೆ ಮತ್ತೆ ಜೆ.ಪಿ ನಡ್ಡಾ ಎಂಟ್ರಿ – ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ
Advertisement
ಪ್ರವಾಸೋದ್ಯಮ ಇಲಾಖೆ ಸಚಿವರಾದ ಆನಂದ್ ಸಿಂಗ್ ಮಾತನಾಡಿ, ಕೃಷ್ಣದೇವರಾಯ ಆಳಿದ ಭವ್ಯ ನಾಡಿನ ರಾಜಧಾನಿ ಹಂಪಿಯ ಉತ್ಸವ ಜಿಲ್ಲೆಯಾದ ನಂತರ ನಡೆಯುತ್ತಿರುವ ಮೊದಲ ಉತ್ಸವ ಇದಾಗಿದೆ. ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. ರಾಜ್ಯ ಮತ್ತು ದೇಶ ಮಟ್ಟದ ಕಲಾವಿದರು ಉತ್ಸವದಲ್ಲಿ ಜನರನ್ನು ರಂಜಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಎಂ.ಟಿ.ಬಿ ನಾಗರಾಜ್, ಜಿಲ್ಲಾಧಿಕಾರಿ ವೆಂಕಟೇಶ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k