ಯಾದಗಿರಿ: ಉದ್ಯೋಗವಿಲ್ಲದವರು ಸೇ ಸಿಎಂ (Say CM) ಅಭಿಯಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.
ಪೇ ಸಿಎಂ ಬಳಿಕ ಕಾಂಗ್ರೆಸ್ ಕೈಗೊಂಡಿರುವ ಸೇ ಸಿಎಂ ಅಭಿಯಾನಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಕೆಲಸಗಳ ಮೂಲಕ ಮಾತನಾಡುತ್ತೇವೆ. ನಮಗೆ ಜವಾಬ್ದಾರಿ ಇದೆ, ಜನಪರ ಕಾಳಜಿ ಇದೆ. ನಾವು ಮಾತನಾಡುವುದಕ್ಕಿಂದ ಹೆಚ್ಚು ಜನಪರ ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.
Advertisement
Advertisement
ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಮೂರು ಪ್ರಕರಣಗಳು ತನಿಖೆಗೆ ಒಳಪಟ್ಟಿವೆ. ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮವಾಗಿರುವ ಪ್ರಕರಣದಲ್ಲಿ ಸಿಐಡಿ 20 ಜನರನ್ನು ಬಂಧಿಸಿದ್ದಾರೆ. ಸಿಐಡಿ ಈಗಾಗಲೇ ವರದಿ ಸಲ್ಲಿಸಿದ್ದಾರೆ. ಸರ್ಕಾರಿ ಅಭಿಯೋಜಕರ ನೇಮಕಾತಿ ಪ್ರಕರಣದಲ್ಲಿ ಅಮಾನತುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
Advertisement
Advertisement
ರಾಹುಲ್ ಗಾಂಧಿ ಅವರ ಪಕ್ಷ ಅಧಿಕಾರದಲ್ಲಿದ್ದಾಗ ಆಗಿರುವ ಹಗರಣಗಳ ಬಗ್ಗೆ ಕಣ್ಣು ತೆಗೆದು ನೋಡಲಿ. ಅವರ ಮೇಲೆ ಏನು ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆಗೆ ಮೋದಿ ವಿಶ್
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ರಸ್ತೆ ಗುಂಡಿಗಳಿಂದಾಗುವ ಅಪಘಾತಗಳಿಗೆ ಸರ್ಕಾರವೇ ನೇರ ಹೊಣೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರೂ ಹಿಂದೆ ಆಡಳಿತ ಮಾಡಿದ್ದರು. ಅವರ ಕಾಲದಲ್ಲಿಯೂ ರಸ್ತೆ ಗುಂಡಿಗಳಿಂದಾಗಿ ಸಾವಾಲಾಗಿತ್ತು. ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಈಗಾಗಲೇ ಸೂಚನೆ ನೀಡಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆಗೂ ಆದೇಶ ನೀಡಲಾಗಿದೆ ಎಂದರು. ಇದನ್ನೂ ಓದಿ: ಡಿಕೆಶಿ ಸ್ವಕ್ಷೇತ್ರದಲ್ಲಿ ಏಸುಕ್ರಿಸ್ತನ ಜಪ- ರೇಷನ್ ಕಾರ್ಡ್‍ನಲ್ಲಿ ಏಸುಕ್ರಿಸ್ತನ ಫೋಟೋ ಮುದ್ರಣ