ಬೆಳಗಾವಿ: ಕಾಂಗ್ರೆಸ್ (Congress) ನಾಯಕರನ್ನು ಮನೆಗೆ ಕರೆಸಿಕೊಳ್ಳಬೇಡಿ ಎಂದು ಹೇಳಿದ್ದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಗೆ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲೇ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ತಿರುಗೇಟು ನೀಡಿದ್ದಾರೆ.
ನಗರದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಬೊಮ್ಮಾಯಿ, 30 ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಯಾರ ಜೊತೆಗೂ ನಾನು ರಾಜೀ ಮಾಡಿಕೊಂಡು ರಾಜಕಾರಣ ಮಾಡಿಲ್ಲ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆ. ನಾನೇನೂ ಯಾರನ್ನೂ ಮನೆಯೊಳಗಿನ ರೂಂಗೆ ಕರೆದುಕೊಂಡು ಹೋಗಿ ಮಾತನಾಡಿಲ್ಲ. ಕಾಂಗ್ರೆಸ್ ನಾಯಕರು ಜೊತೆಗಿನ ಎಲ್ಲ ಮಾತುಕತೆಗಳು ಬಹಿರಂಗವಾಗಿಯೇ ನಡೆಯುತ್ತವೆ. ಬಿಜೆಪಿಯೇ ನನ್ನ ತಂದೆ-ತಾಯಿ, ಬಿಜೆಪಿ (BJP) ಕಾರ್ಯಕರ್ತರು ನನ್ನ ಸಹೋದರ-ಸಹೋದರಿಯರು. ನಾನು ಸಿಎಂ ಆಗಿದ್ದಾಗ ಪಕ್ಷ, ಕಾರ್ಯಕರ್ತರ ಆಶಯದಂತೆ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದ್ದೇನೆ ಎಂದರು.
Advertisement
Advertisement
ಸಿಎಂ ಆಗಿದ್ದಾಗ ಕಾರ್ಯಕರ್ತರ ಹಿತ ಕಾದಿದ್ದೇನೆ, ಮುಂದೆಯೂ ಕಾರ್ಯಕರ್ತರ ಹಿತ ಕಾಯುವೆ. ದೇಶ, ಧರ್ಮ ರಕ್ಷಣೆಗೆ ನಾನು ಸದಾ ಜಾಗೃತನಾಗಿ ಕೆಲಸ ಮಾಡುತ್ತೇನೆ. ಚುನಾವಣೆ ಸೋಲನ್ನು ಮರೆತು ವೇದಿಕೆ ಮೇಲಿನ ಎಲ್ಲ ನಾಯಕರು ಒಂದಾಗೋಣ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿ ಮಾಡೋಣ. ಇದಕ್ಕಾಗಿ ಎಲ್ಲ ಪಕ್ಷಗಳ ನಾಯಕರು, ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡೋಣ ಎಂದು ಬೊಮ್ಮಾಯಿ ಮನವಿ ಮಾಡಿದರು. ಇದನ್ನೂ ಓದಿ: ಮತ್ತೆ ಹೊಂದಾಣಿಕೆ ರಾಜಕೀಯ ಬಾಂಬ್- ಬಿಜೆಪಿ ಸಮಾವೇಶಗಳಲ್ಲೇ ಗದ್ದಲ, ಆಕ್ರೋಶ ಸ್ಫೋಟ
Advertisement