ನವದೆಹಲಿ: ಸಂಸದ, ಕರ್ನಾಟಕ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ (Basavaraj Bommai) ಅವರಿಂದು (ಜೂ.5) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ಭೇಟಿಯಾಗಿದ್ದಾರೆ.
ಇಂದು ದೆಹಲಿಯ (Delhi) ಬಿಜೆಪಿ ಕೇಂದ್ರ ಕಚೇರಿಯಲ್ಲಿ (BJP Office) ಬೊಮ್ಮಾಯಿ ಅವರು ನಿತಿನ್ ನಬಿನ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: 3,395 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
ಇಂದು ನವದೆಹಲಿಯಲ್ಲಿ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದೆನು.
Today in New Delhi, I had a cordial meeting with @BJP4India National President Shri @NitinNabin Ji and discussed current affairs and… pic.twitter.com/SHGHvGrusP
— Basavaraj S Bommai (@BSBommai) June 5, 2026
ಈ ಕುರಿತು ಬಸವರಾಜ್ ಬೊಮ್ಮಾಯಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಪ್ರಸಕ್ತ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾಗಿ ತಿಳಿಸಿದ್ದಾರೆ. ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
