ಮಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಚಾರಿಸಿದರು.
ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ (Kedambadi Ramaiah Gowda) ರ ಪ್ರತಿಮೆ ಲೋಕಾರ್ಪಣೆ ಮಾಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಸಿಎಂ ಅಲ್ಲಿಂದ ನೇರವಾಗಿ ಎ.ಜೆ ಆಸ್ಪತ್ರೆ (A J Hosppital) ಗೆ ತೆರಳಿದ್ದಾರೆ. ಅಲ್ಲಿ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
Advertisement
ಇಂದು ಮಂಗಳೂರು ಪ್ರವಾಸದ ಸಂದರ್ಭದಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು. @BJP4Karnataka @nalinkateel pic.twitter.com/Uc8GSq08MP
— Basavaraj S Bommai (@BSBommai) November 19, 2022
Advertisement
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಇಂದು ಮಂಗಳೂರು ಪ್ರವಾಸದ ಸಂದರ್ಭದಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿ ಸಂಸದ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲಾಯಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಹೋರಾಟಗಾರರೊಂದಿಗೆ ಕೂತು ಪ್ರಚಾರ ಪಡೆದು ಹೋದ ಯು.ಟಿ ಖಾದರ್‌ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೇ?: ಭರತ್ ಶೆಟ್ಟಿ
Advertisement
ಇಂದು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ಆರೋಗ್ಯ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದ ಸಿಎಂ ಶ್ರೀ @BSBommai ಅವರಿಗೆ ಧನ್ಯವಾದಗಳು. https://t.co/VcjMsmCc8G
— Nalinkumar Kateel (@nalinkateel) November 19, 2022
Advertisement
ಇತ್ತ ಕಟೀಲ್ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ನನ್ನನ್ನು ವೈಯಕ್ತಿಕವಾಗಿ ಭೇಟಿಯಾಗಿ ಆರೋಗ್ಯ ಕುಶಲೋಪರಿ ವಿಚಾರಿಸಿ ಶುಭ ಹಾರೈಸಿದ ಸಿಎಂ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.