ಮೈಸೂರು: ಮೈಸೂರು ದಸರಾ ವಿದ್ಯುತ್ ದೀಪಾಲಂಕಾರವನ್ನು ಒಂಬತ್ತು ದಿನಗಳವರೆಗೆ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
Advertisement
ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು, ನಾಡಿನ ವಿವಿಧ ಕಡೆಗಳಿಂದ ಪ್ರವಾಸಿಗರು ದೊಡ್ಡ ಪ್ರಮಾಣದಲ್ಲಿ ಮೈಸೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಜನಪ್ರತಿನಿಧಿಗಳು ಮತ್ತು ಜನತೆಯ ಬೇಡಿಕೆಯ ಮೇರೆಗೆ ವಿದ್ಯುತ್ ದೀಪಾಲಂಕಾರವನ್ನು ವಿಸ್ತರಿಸುತ್ತಿರುವುದಾಗಿ ತಿಳಿಸಿದರು. ಇದನ್ನೂ ಓದಿ: ಧಾರವಾಡದಲ್ಲಿ ಕೃತಕ ಆನೆ ಬಳಸಿ ದಸರಾ ಮೆರವಣಿಗೆ
Advertisement
Advertisement
ದಸರಾ ಹಿನ್ನೆಲೆಯಲ್ಲಿ ಅರಮನೆಗೆ ವಿಶೇಷ ದೀಪಾಲಂಕಾರ ಮಾಡಲಾಗಿದೆ. ದಸರಾ ವೈಭವದಲ್ಲಿ ದೀಪಾಲಂಕಾರವೂ ವಿಶೇಷತೆಯನ್ನು ಹೊಂದಿದೆ. ಇದನ್ನ ನೋಡಲು ಸಾವಿರಾರು ಜನ ಬರುತ್ತಾರೆ. ಹೀಗಾಗಿ ದೀಪಾಲಂಕಾರವನ್ನ ವಿಸ್ತರಣೆ ಮಾಡೋದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು. ಇದನ್ನೂ ಓದಿ: ಅರಮನೆಯಲ್ಲಿ ವಿಜಯ ದಶಮಿ ಸಂಭ್ರಮ