ಬೆಂಗಳೂರು: ಕಾವೇರಿ (Cauvery Water) ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಸಿಡಬ್ಲುಎಂಎ ಆದೇಶದಂತೆ ನೀರು ಬಿಡುವುದಾದರೆ ಸುಪ್ರೀಂ ಕೋರ್ಟ್‍ನಲ್ಲಿ ವಾದ ಮಾಡಲು ಏನಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಪ್ರಶ್ನಿಸಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸೆ.12ರ ನಂತರ ನೀರು ತಮಿಳುನಾಡಿಗೆ (Tamil Nadu) ಬಿಡಲು ಆಗುವುದಿಲ್ಲ ಎಂದು ಸುಪ್ರೀಂ ಕೊರ್ಟ್ ಮುಂದೆ ಅಫಿಡವಿಟ್ ಹಾಕಿದೆ. ಅದಕ್ಕೆ ತಾವು ಬದ್ಧರಾಗಿರಬೇಕು. ಸರ್ಕಾರದ ಅಫಿಡವಿಟ್ ಎಂದರೆ ಸುಮ್ಮನೆ ಆಗುವುದಿಲ್ಲ. ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ತಾನೇ ಸುಳ್ಳು ಹೇಳುತ್ತಿದೆ ಎಂದಾಯಿತು ಎಂದಿದ್ದಾರೆ. ಇದನ್ನೂ ಓದಿ: ಹಿಂದೆ ಏನಾಯ್ತು ಅನ್ನೋದು ಮುಖ್ಯವಲ್ಲ, ಇಂದು ಏನಾಯ್ತು ಎಂಬುದು ಮುಖ್ಯ: ದಿನೇಶ್ ಗುಂಡೂರಾವ್
Advertisement
Advertisement
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನಾನು ಅವರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದೇನೆ ಎಂದು ಹೇಳಿದ್ದಾರೆ. ಅವರನ್ನು ಇಕ್ಕಟ್ಟಿಗೆ ಸಿಲುಕಿಸುವುದರಿಂದ ನನಗೇನು ಆಗುವುದಿಲ್ಲ. ಅದರ ಅಗತ್ಯ ಕೂಡ ನನಗಿಲ್ಲ. ಸರ್ಕಾರದ ನಡೆ ರಾಜ್ಯದ ರೈತರನ್ನು, ಕಾವೇರಿ ಮಕ್ಕಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ರಾಜ್ಯದ ಹಿತ ದೃಷ್ಟಿಯಿಂದ ನಾನು ಸಲಹೆ ನೀಡಿದ್ದೇನೆ. ಸರ್ಕಾರ ನಮ್ಮ ಸಲಹೆಯನ್ನು ಸ್ವೀಕರಿಸಲು ತಯಾರಿಲ್ಲ. ಸರ್ಕಾರ ನಡೆಸುವವರಿಗೆ ಜವಾಬ್ದಾರಿ, ಅರಿವು ಇರಬೇಕು. ವಕೀಲರು ಯಾವಾಗಲೂ ನೀರು ಬಿಡುವಂತೆ ಸಲಹೆ ನಿಡುತ್ತಾರೆ. ನಾವು ಅದನ್ನು ಬದಲಾಯಿಸಿದ್ದೆವು. ನಮ್ಮ ಅವಧಿಯಲ್ಲಿ ರಾತ್ರೋರಾತ್ರಿ ನೀರು ಬಿಟ್ಟಿಲ್ಲ. ನೀವು ಸಿಡಬ್ಲುಎಂಎ ಆದೇಶ ಪಾಲನೆ ಮಾಡಿದ ಮೇಲೆ ಸುಪ್ರೀಂ ಕೋರ್ಟ್ ಮುಂದೆ ಹೇಳುವುದೇನಿದೆ ಎಂದು ಪ್ರಶ್ನಿಸಿದ್ದಾರೆ.
Advertisement
Advertisement
ಈಗ ಪ್ರಧಾನಿ ಬಳಿ ಹೋಗುವುದರಲ್ಲಿ ಅರ್ಥವಿಲ್ಲ. ಮುಂಚೆಯೇ ಈ ವಿಚಾರ ಪ್ರಧಾನಿ ಬಳಿ ಚರ್ಚೆಯಾಗಿದೆ. ಈಗ ಅಲ್ಲಿ ಚರ್ಚೆ ಅಗತ್ಯವಿಲ್ಲ. ಸುಮ್ಮನೆ ರಾಜ್ಯದ ಜನರ ದಾರಿ ತಪ್ಪಿಸಲು ರಾಜ್ಯ ಸರ್ಕಾರ ಪ್ರಧಾನಿ ಬಳಿ ನಿಯೋಗ ತೆಗೆದುಕೊಂಡು ಹೋಗುವುದಾಗಿ ಹೇಳುತ್ತಿದೆ. ನಮ್ಮ ವಕೀಲರು ತಮಿಳುನಾಡಿನ ಅಣೆಕಟ್ಟುಗಳಲ್ಲಿನ ನೀರಿನ ವಸ್ತುಸ್ಥಿತಿ, ಅವರು ಬಳಕೆ ಮಾಡಿರುವ ನೀರಿನ ಪ್ರಮಾಣವನ್ನು ಸುಪ್ರೀಂ ಕೋರ್ಟ್‍ಗೆ ಮನವರಿಕೆ ಮಾಡುವ ಕೆಲಸ ಮಾಡದಿದ್ದರೆ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ರಾಜ್ಯದ ಪರ ವಕೀಲರು ಮೊದಲಿನಿಂದಲೂ ಇದ್ದಾರೆ. ನಮ್ಮ ಅವಧಿಯಲ್ಲಿಯೂ ಅವರೇ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಸೂಕ್ತ ಸಲಹೆ ಕೊಡಲು ನಾವು ತಯಾರಿದ್ದೇವೆ. ಅವರು ಸಲಹೆ ತೆಗೆದುಕೊಳ್ಳಲು ಸಿದ್ಧರಿಲ್ಲದಿದ್ದರೆ ಏನು ಮಾಡುವುದು ಎಂದಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡರು ನ್ಯಾಯಾಲಯದ ಹೊರಗೆ ಈ ವಿಷಯ ಇತ್ಯರ್ಥ ಮಾಡಿಕೊಳ್ಳಬೇಕು ಎಂದು ನೀಡಿರುವ ಸಲಹೆ ಕುರಿತು, ಮಾತುಕತೆಗೆ ತಮಿಳುನಾಡು ಸಹಕಾರ ನೀಡುವುದಿಲ್ಲ. ಮೊದಲಿನಿಂದಲೂ ಅವರು ಅಸಹಕಾರ ತೋರುತ್ತಲೇ ಬಂದಿದ್ದಾರೆ. ತಮಿಳುನಾಡು ಸಂಸದರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತಿರುವ ಕುರಿತು, ನಮ್ಮ ಸಂಸತ್ ಸದಸ್ಯರು ಕೇಂದ್ರ ನಿರಾವರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ಸೂಚಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಿಳಾ ಮೀಸಲಾತಿಯನ್ನ ಕಾಂಗ್ರೆಸ್ ಸ್ವಾಗತ ಮಾಡುತ್ತದೆ: ದಿನೇಶ್ ಗುಂಡೂರಾವ್
Web Stories