ಬೆಂಗಳೂರು: ಶಾಸಕ ಜಮೀರ್ ಅಹ್ಮದ್ ಮನೆ ಹಾಗೂ ಕಚೇರಿಗಳ ಮೇಲೆ ಎಸಿಬಿ ದಾಳಿ ರಾಜಕೀಯ ಪ್ರೇರಿತ ಎಂದು ಟೀಕಿಸಿರುವ ಕಾಂಗ್ರೆಸ್ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಬಾಕಿ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಳಿ ನಡೆದಿದ್ದು, ವಿಚಾರಣೆ ನಡೆಯುತ್ತಿದೆ. ಎಸಿಬಿ ದಾಳಿ ಸಂದರ್ಭದಲ್ಲಿ ಪ್ರತಿಭಟನೆ ಮಾಡಿಸಲಾಗುತ್ತಿದೆ. ಇದು ರಾಜಕೀಯ ಪ್ರೇರಿತ ಪ್ರತಿಭಟನೆ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಕನಸಿನ ಕೂಸಿನಿಂದಲೇ ಜಮೀರ್ ಲಾಕ್
ಪ್ರಕರಣಗಳು ಬಾಕಿ ಉಳಿದಿದ್ದವು. ಸಾಕ್ಷಿ ಆಧರಿಸಿ ಎಸಿಬಿ ಕೆಲಸ ಮಾಡುತ್ತಿದೆ. ದಾಖಲೆಗಳನ್ನು ಆಧರಿಸಿ ಪ್ರಕರಣ ದಾಖಲಿಸುತ್ತಿದೆ. ಇದು ನಿರಂತರವಾದ ಪ್ರಕ್ರಿಯೆ ಎಂದು ತಿಳಿಸಿದ್ದಾರೆ.
ರಾಜಕೀಯ ಕೈವಾಡ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ಇದು ಅವರ ಹೊಸ ಡೈಲಾಗ್ ಅಲ್ಲ. ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳಬೇಡಿ ಅಂತಾ ಕೋರ್ಟ್ ಹೇಳುತ್ತೆ. ಆ ಕರ್ತವ್ಯ ಮಾಡೋಕೆ ಹೋದಾಗ ಅಡಚಣೆ ಮಾಡುವುದು, ಅದಕ್ಕೆ ರಾಜಕೀಯ ಬಣ್ಣ ಕೊಡುವುದು ಸರ್ವೇ ಸಾಮಾನ್ಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ – ಶಾಸಕ ಜಮೀರ್ ಮನೆ ಮೇಲೆ ಎಸಿಬಿ ದಾಳಿ
ರಾಜಕೀಯ ಕೈವಾಡ ಎನ್ನುವುದು ಕಾಂಗ್ರೆಸ್ ಘೋಷವಾಕ್ಯ. ಅವರು ಕೆಲಸದ ಬಗ್ಗೆ ಮಾತನಾಡುವುದಿಲ್ಲ. ಕರ್ತವ್ಯ ಮಾಡುವ ಪೊಲೀಸರಿಗೆ ನಾವು ಯಾವುದೇ ಅಡಚಣೆ ಮಾಡುವುದು ಎಂದು ಸ್ಪಷ್ಟಪಡಿಸಿದ್ದಾರೆ.