ಬೆಂಗಳೂರು: ನಾನು ಯಾರಿಗೂ ಹಣ ನೀಡುವಂತೆ ಸೂಚನೆ ಕೊಟ್ಟಿಲ್ಲ. ಇದು ಕಾಂಗ್ರೆಸ್‌ನ (Congress) ಟೂಲ್ ಕಿಟ್ ನ ಮುಂದುವರೆದ ಭಾಗ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಕಿಡಿಕಾರಿದರು.
ನಡೆಯುತ್ತಿರುವ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಕಲಬುರಗಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಹಣದ (Money) ಗಿಫ್ಟ್ (Gift) ವಿಚಾರವಾಗಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದರು. ಸುಳ್ಳು ಸೃಷ್ಟಿ ಮಾಡುವುದನ್ನೇ ಕಾಂಗ್ರೆಸ್ ಚಾಳಿ ಮಾಡಿಕೊಂಡಿದೆ. ನಾನು ಯಾರಿಗೂ ಗಿಫ್ಟ್ ಕೊಡುವಂತೆ ಸೂಚನೆ ಕೊಟ್ಟಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
Advertisement
ಕಾಂಗ್ರೆಸ್ ಇದ್ದಾಗ ಏನೇನು ಕೊಟ್ಟಿದ್ದಾರೆ ಎಲ್ಲರಿಗೂ ಗೊತ್ತಿದೆ. ಲ್ಯಾಪ್ ಟಾಪ್, ಐ ಫೋನ್, ಬಂಗಾರದ ಕಾಯಿನ್ ಎಲ್ಲವೂ ಕೊಟ್ಟಿದ್ದಾರೆ. ಕಾಂಗ್ರೆಸ್ ಅವರಿಗೆ ಈ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: BJP ಸೇರಲು ಕಂಗನಾಗೆ ಗ್ರೀನ್ ಸಿಗ್ನಲ್ ಕೊಟ್ಟು ಆದರೆ.. ಎಂದ ನಡ್ಡಾ
Advertisement
Advertisement
ಘಟನೆಗೆ ಸಂಬಂಧಿಸಿ ಲೋಕಾಯುಕ್ತಕ್ಕೆ ಈಗ ದೂರು ಕೊಟ್ಟಿದ್ದಾರೆ. ಲೋಕಾಯುಕ್ತಕ್ಕೆ ತನಿಖೆ ಮಾಡಲಿ. ಸತ್ಯ ಹೊರಗೆ ಬರುತ್ತದೆ. ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ತುಂಬಾ ಕೆಟ್ಟದಾಗಿ ಮಾತನಾಡಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ನಾನು ಸ್ಪಷ್ಟವಾಗಿ ಹೇಳುತ್ತೇನೆ. ನಾನು ಯಾರಿಗೂ ಗಿಫ್ಟ್ ಕೋಡೋಕೆ ಸೂಚನೆ ಕೊಟ್ಟಿಲ್ಲ. ಲೋಕಾಯುಕ್ತ ಒಂದು ಪೊಲೀಸ್ ಏಜೆನ್ಸಿ ಇದೆ. ತನಿಖೆ ಮಾಡಲಿ ಸತ್ಯ ಹೊರಗೆ ಬರುತ್ತದೆ ಎಂದರು. ಇದನ್ನೂ ಓದಿ: ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಯುವಕ ಆತ್ಮಹತ್ಯೆಗೆ ಶರಣು