ಬೆಂಗಳೂರು: ರಾಷ್ಟ್ರೀಯ ಯುವ ಜನೋತ್ಸವದ (Youth Festival) ಲೋಗೋ, ಮಸ್ಕಟ್‌ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣ ಗೌಡ (Narayana Gowda) ಅವರು ಬಿಡುಗಡೆಗೊಳಿಸಿದರು.
ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಲೋಗೋ, ಮಸ್ಕಟ್‌ನ್ನು ಬಿಡುಗಡೆಗೊಳಿಸಲಾಯಿತು. ಕೇಂದ್ರ ಸರ್ಕಾರದ ಯುವಜನ ಮತ್ತು ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Singh Thakur) ಅವರು ವರ್ಚುವಲ್ ಮೂಲಕ ಭಾಗಿಯಾಗಿದ್ದರು.
ಲೋಗೋ ಬಿಡುಗಡೆ ಬಳಿಕ ಅನುರಾಗ್ ಸಿಂಗ್ ಠಾಕೂರ್ ನೇತೃತ್ವದಲ್ಲಿ ಸ್ಟೀರಿಂಗ್ ಕಮಿಟಿ ಸಭೆ ನಡೆಸಲಾಯಿತು. ರಾಷ್ಟ್ರೀಯ ಯುವ ಜನೋತ್ಸವ ಯಶಸ್ವಿಗೊಳಿಸುವ ಸಂಬಂಧಿಸಿದಂತೆ ಉದ್ಘಾಟನೆ, ಸಿದ್ಧತೆ ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ
ಜನವರಿ 12-16 ರವರೆಗೂ ಹುಬ್ಬಳ್ಳಿ- ಧಾರವಾಡದಲ್ಲಿ ರಾಷ್ಟ್ರೀಯ ಯುವ ಜನೋತ್ಸವ ನಡೆಯಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಇದನ್ನೂ ಓದಿ: ಬಿಜೆಪಿಯ 20 ಶಾಸಕರಿಗೆ ಟಿಕೆಟ್ ಟೆನ್ಷನ್ – ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k