ಬೆಂಗಳೂರು: ಕನ್ನಡ ಸಂಘಟನೆಗಳು ಡಿಸೆಂಬರ್ 31 ರಂದು ಕರೆದಿರುವ ಕರ್ನಾಟಕ ಬಂದ್ ಕೈಬಿಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿಕೊಂಡಿದ್ದಾರೆ.
Advertisement
ಹುಬ್ಬಳ್ಳಿಯಲ್ಲಿ ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ವಿರೋಧಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಎಂಇಎಸ್ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಕಾನೂನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲಿ 800 ರ ಆಸುಪಾಸಿನಲ್ಲಿ ಓಮಿಕ್ರಾನ್ – ದೆಹಲಿಯಲ್ಲಿ ದಾಖಲೆಯ 238 ಕೇಸ್
Advertisement
Advertisement
ಕರ್ನಾಟಕ ಬಂದ್‍ಗೆ ಕರೆ ಕೊಡುವುದು ಸೂಕ್ತವಲ್ಲ, ಬಂದ್ ಮಾಡುವುದು ಸಮಸ್ಯೆಗಳಿಗೆ ಉತ್ತರವಲ್ಲ. ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಂದ್ ಕೈಬಿಡಲು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದನ್ನೂ ಓದಿ: ಹೊಟ್ಟೆಯಲ್ಲಿ 1 ಕೆ.ಜಿ ಕೊಕೇನ್ ಬಚ್ಚಿಟ್ಟು ಪ್ರಯಾಣ – ವಿದೇಶಿ ಮಹಿಳೆ ಅರೆಸ್ಟ್
Advertisement