ಹಾವೇರಿ: ಅಲ್ಪಸಂಖ್ಯಾತ ಸಮುದಾಯದ ಮತದಾರರನ್ನು ಓಲೈಸಲು ಕಾಂಗ್ರೆಸ್ ಪಕ್ಷದ ನಾಯಕರು RSS ಗುರಿಯಾಗಿಟ್ಟುಕೊಂಡು ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಆದರೆ ಆ ಪ್ರಯತ್ನದಲ್ಲಿ ಅವರು ಯಶಸ್ವಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇದನ್ನೂ ಓದಿ: ಬಿಜೆಪಿ ಸಾಧನೆ ಶೂನ್ಯ, ಅವಹೇಳನಕಾರಿ ಮಾತಾಡ್ತಿದ್ದಾರೆ: ಡಿಕೆಶಿ ಕಿಡಿ
ಹಾನಗಲ್ ತಾಲೂಕಿನ ನರೇಗಲ್ಲ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ವಿರಕ್ತಮಠಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರಿಗೆ ಬೇರೆ ವಿಷಯಗಳು ಸಿಗುತ್ತಿಲ್ಲ. ಹೀಗಾಗಿ ಆರ್‍ಎಸ್‍ಎಸ್ ಸಂಘಟನೆಯನ್ನು ಪ್ರಚಾರದಲ್ಲಿ ಎಳೆದು ತರುತ್ತಿದ್ದಾರೆ. ಆರ್‍ಎಸ್‍ಎಸ್ ಸಂಘಟನೆಯನ್ನು ಟೀಕಿಸಿದರೆ ಅಲ್ಪಸಂಖ್ಯಾತರ ಮತಗಳನ್ನು ಪಡೆಯಬಹುದು ಎಂಬ ಕಾರಣದಿಂದ ಈ ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಆದರೆ ಈ ಪ್ರಯತ್ನದಲ್ಲಿ ಅವರು ಯಶಸ್ವಿ ಆಗುವುದಿಲ್ಲ ಎಂದರು. ಇದನ್ನೂ ಓದಿ: ಕಾಲು ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು
Advertisement
Advertisement
ತಮ್ಮ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಣ್ಣತನದಿಂದ ಇವೆ. ಹೀಗಾಗಿ ಅಂತ ಸಣ್ಣತನದ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಬೊಮ್ಮಾಯಿ ತಿಳಿಸಿದರು. ಅವರ ಸಣ್ಣತನದ ಹೇಳಿಕೆಗಳು ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಸಾಧ್ಯವಿಲ್ಲ. ಹಾನಗಲ್ ಕ್ಷೇತ್ರದ ಜನರ ವಿಶ್ವಾಸ ನಮ್ಮ ಮೇಲಿದೆ. ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶಿವರಾಜ್ ಸಜ್ಜನ್ ಅವರನ್ನು ಇಲ್ಲಿನ ಜನತೆ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೇಳಿದರು. ಇದನ್ನೂ ಓದಿ: ರಮೇಶ್ ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ
Advertisement
Advertisement
ಈಗಾಗಲೇ ಒಂದು ಬಾರಿ ಹಾನಗಲ್ ನಲ್ಲಿ ಬಹಿರಂಗ ಚುನಾವಣೆ ಪ್ರಚಾರ ಮಾಡಿದ್ದೇನೆ. ನಾಳೆಯಿಂದ ಮತ್ತೆ ಹಾನಗಲ್‍ನಲ್ಲಿ ಪ್ರಾಚಾರ ಕೈಗೊಳ್ಳುತ್ತೇನೆ ಎಂದು ಅವರು ಹೇಳಿದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು.