ಬೆಂಗಳೂರು: ತೊಗರಿ ಬೆಳೆಗಾರರ (Pigeon Pea Grower) ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು ಈ ಹಿನ್ನೆಲೆಯಲ್ಲಿ ಇಂದು (ಮಂಗಳವಾರ) ಸಂಜೆ 4 ಗಂಟೆಗೆ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು (ಮಂಗಳವಾರ) ಸಂಜೆ ಘೋಷಣೆ ಮಾಡಲಾಗುವುದು ಎಂದರು. ಇದನ್ನೂ ಓದಿ: ಸರ್ಕಾರಿ ಹುದ್ದೆ ಉಳಿಸಿಕೊಳ್ಳಲು ಹೆಣ್ಣು ಮಗುವನ್ನು ಕಾಲುವೆಗೆ ಎಸೆದ ದಂಪತಿ!
Advertisement
Advertisement
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಸಚಿವರ ಫಾರ್ಮ್ ಹೌಸ್ನಲ್ಲಿ ಪತ್ತೆಯಾಗಿದ್ದ 30 ವನ್ಯಜೀವಿಗಳ ಪೈಕಿ 2 ಪ್ರಾಣಿ ಸಾವು
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k