ಬೆಂಗಳೂರು: ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ (Bengaluru Mysuru Expressway) ಟೋಲ್ (Toll) ಸಂಗ್ರಹದ ಬಗ್ಗೆ ತಕರಾರು ಜನಸಾಮಾನ್ಯರದ್ದಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಅವರು ರಾಜಕಾರಣ ಮಾಡುತ್ತಿದ್ದಾರೆ ಅಂತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Basavaraj Bommai) ಕಿಡಿಕಾರಿದ್ದಾರೆ.
ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿ ಟೋಲ್ ಸಂಗ್ರಹದ ಬಗ್ಗೆ ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಕೆಶಿ ಬಳಸುವ ಭಾಷೆ, ನಡೆದುಕೊಂಡ ರೀತಿ ಯಾವುದೇ ಕನ್ನಡಿಗರಿಗೆ ಶೋಭೆ ತರುವಂಥದ್ದಲ್ಲ ಎಂದು ಗುಡುಗಿದರು. ಇದನ್ನೂ ಓದಿ: KPTCL ನೌಕರರಿಗೆ ಶೇ. 20ರಷ್ಟು ವೇತನ ಪರಿಷ್ಕರಣೆ
Advertisement
Advertisement
ರಾಷ್ಟ್ರೀಯ ಹೆದ್ದಾರಿ ಬರುವ ಮುನ್ನವೂ ಟೋಲ್ ಸಂಗ್ರಹವಾಗುತ್ತದೆ ಎನ್ನುವುದು ಎಲ್ಲರಿಗೂ ತಿಳಿದಿದೆ. ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಬಹಳಷ್ಟು ಸೇವೆಗಳು ಸರ್ವಿಸ್ ರಸ್ತೆಯಲ್ಲಿಯೇ ಇದೆ. ಅಲ್ಲೆಲ್ಲೂ ಟೋಲ್ ಇಲ್ಲ. ವಿನಾಃಕಾರಣ ರಾಜಕಾರಣವಾಗುತ್ತಿದೆ ಎಂದರು. ಇದನ್ನೂ ಓದಿ: ಗಡಿ ಕನ್ನಡಿಗರಿಗೆ ಮಹಾರಾಷ್ಟ್ರದ ಆರೋಗ್ಯ ವಿಮೆ – ಬೊಮ್ಮಾಯಿ ತೀವ್ರ ಖಂಡನೆ