ಗದಗ: ಕಾಂಗ್ರೆಸ್ ಸರ್ಕಾರ (Karnaraka Govt) ದಿವಾಳಿಯಾಗಿದೆ, ಆದ್ದರಿಂದ ಕರ್ನಾಟಕವನ್ನೇ ಮಾರಾಟಕ್ಕಿಟ್ಟಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಗುಡುಗಿದ್ದಾರೆ.
ನಗರದ ತೋಂಟದಾರ್ಯ ಕಲ್ಯಾಣ ಕೇಂದ್ರದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ (BJP Workers) ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಕಾಂಗ್ರೆಸ್‌ನಲ್ಲಿ (Congress ಕೇವಲ ಅಧಿಕಾರದ ದಾಹ ಬಿಟ್ಟರೆ ಬೇರೆ ಏನೂ ಬೇಕಿಲ್ಲ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಭಾರೀ ಮಳೆಗೆ ಮೃತಪಟ್ಟವರ ಕುಟುಂಬಗಳಿಗೆ ದೆಹಲಿ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ
ಕರ್ನಾಟಕದ ರಾಜಕಾರಣ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಆಗ್ತಿದೆ. ದಿನನಿತ್ಯ ಜನ ನೋಡ್ತಿದ್ದಾರೆ. ಯಾರು ಸಿಎಂ ಆಗಬೇಕು? ಯಾರು, ಎಷ್ಟು ಜನ ಡಿಸಿಎಂ ಆಗಬೇಕು? ಯಾವ ಜಾತಿಯವರು ಡಿಸಿಎಂ ಆಗಬೇಕು? ಎಂಬ ಕಚ್ಚಾಟ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ. ಅಭಿವೃದ್ಧಿ ಶೂನ್ಯ ಅಂತ ಕಾಂಗ್ರೆಸ್ ಪಕ್ಷದ ಶಾಸಕರೇ ಹೇಳ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕರ್ನಾಟಕವನ್ನು ಕಾಂಗ್ರೆಸ್ ಮಾರಾಟಕ್ಕಿಟ್ಟಿದೆ. ಈ ಸರ್ಕಾರ ದಿವಾಳಿ ಆಗಿದೆ. ಸರ್ಕಾರದ ವಿರುದ್ಧ ಜನರ ಆಂದೋಲನ ಪ್ರಾರಂಭ ಮಾಡುವ ಕಾಲವೂ ಸನಿಹವಾಗಿದೆ. ಮುಂಬರುವ ದಿನಗಳಲ್ಲಿ ಜನಪರ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್
ಇದೇ ವೇಳೆ ವಿಧಾನಸಭೆ ಚುನಾವಣೆ ಬಗ್ಗೆ ಮತ್ತೆ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಹೇಳಿದ್ದೆನೆ, ಈಗಲೂ ಹೇಳ್ತೀನಿ. 1 ವರ್ಷದಲ್ಲಿ ವಿಧಾನಸಭೆ ಚುನಾವಣೆ ಬಂದೇ ಬರುತ್ತೆ. ಗದಗನಲ್ಲಿ ಮತ್ತೊಮ್ಮೆ 4 ಕ್ಷೇತ್ರದಲ್ಲಿ ಬಿಜೆಪಿ ಶಾಸಕರನ್ನು ಆಯ್ಕೆ ಮಾಡುವ ಮೂಲಕ ಕಮಲದ ಬಾವುಟ ಹಾರಿಸುವ ಸಂಕಲ್ಪ ಮಾಡೋಣ ಎಂದರಲ್ಲದೇ ಎಂಪಿ ಚುನಾವಣೆ ಸ್ಯಾಂಪಲ್, ಫಿಕ್ಟರ್ ಅಬಿ ಬಾಕಿ ಹೈ ಎಂದು ಕಾಂಗ್ರೆಸ್‌ಗೆ ಟಾಂಗ್ ಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ನರಗುಂದ ಶಾಸಕ ಸಿ.ಸಿ ಪಾಟೀಲ, ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಎಮ್.ಎಸ್ ಕರಿಗೌಡ್ರ, ಮೋಹನ್ ಮಾಳಶೆಟ್ಟಿ, ಶ್ರೀಪತಿ ಉಡುಪಿ ಸೇರಿದಂತೆ ಅನೇಕ ಮುಖಂಡರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.