ಹುಬ್ಬಳ್ಳಿ: ಮೋದಿ ಭೇಟಿಯಿಂದ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಮೋದಿ ಅವರು ಬಂದ ಮೇಲೆ ಸಿಗುತ್ತಿರುವ ಜನ ಬೆಂಬಲದಿಂದ ಅವರು ವಿಚಲಿತಗೊಂಡಿದ್ದಾರೆ. ಅನುಭವಿ ಮಾಜಿ ಸಿಎಂ ಒಬ್ಬರು ಈ ರೀತಿ ಮಾತನಾಡುವುದು ಸರಿಯಲ್ಲ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ನಡೆಸಿದರು.
ಅಮಿತ್ ಶಾ (Amit Shah) ಸೇರಿದಂತೆ ಅನೇಕ ನಾಯಕರು ಚುನಾವಣಾ ಏಜೆಂಟ್‌ರಂತೆ ವರ್ತಿಸ್ತಾರೆ ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ (Hubballi) ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಈಗಾಗಲೇ ಪಕ್ಷ ಬಲವರ್ಧನೆ ನಡೆಯುತ್ತಿದೆ. ಮೋದಿ (Narendra Modi), ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಮತ್ತೆ ಬರ್ತಾರೆ. ಪಕ್ಷದ ಬಲವರ್ಧನೆ ದೃಷ್ಟಿಯಿಂದ ಹಲವಾರು ನಾಯಕರು ರಾಜ್ಯಕ್ಕೆ ಬರ್ತಾರೆ. ದಾವಣಗೆರೆಯಲ್ಲಿ ಮಾರ್ಚ್‌ನಲ್ಲಿ ರಥಯಾತ್ರೆ ಆರಂಭಿಸಲಾಗುವುದು ಎಂದು ಹೇಳಿದರು.
Advertisement
Advertisement
ಮಾಜಿ ಸಿಎಂ ಹೆಚ್‌ಡಿಕೆ ರಾಜಕೀಯ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಅವರದ್ದು ಇನ್ನೂ ನಿವೃತ್ತಿಯಾಗೋ ವಯಸ್ಸಲ್ಲ. ಇನ್ನೂ ಸೇವೆ ಮಾಡಬೇಕಿದೆ. ಚುನಾವಣೆ ಸಂದರ್ಭದಲ್ಲಿ ಇಂಥವೆಲ್ಲ ನಡೆಯುತ್ತಿರುತ್ತದೆ. ಜನ ಪ್ರಬುದ್ಧರಾಗಿದ್ದು, ಎಲ್ಲವನ್ನೂ ಗಮನಿಸುತ್ತಾರೆ. ಚುನಾವಣೆಯಿಂದ ಚುನಾವಣೆಗೆ ಜನರು ಇನ್ನೂ ಪ್ರಬುದ್ಧರಾಗುತ್ತಿದ್ದಾರೆ. ನಾವು ಮಾತನಾಡುವಾಗ ಅದರ ಹಿಂದಿರುವ ಕಲ್ಪನೆಯೂ ಇರಬೇಕೆಂದು ತಿಳಿಸಿದರು.
Advertisement
ಬನವಾಸಿಯಲ್ಲಿ 4 ಮಂದಿ ಗೋ ಬ್ಯಾಕ್ ಅಂದ್ರೆ ತಲೆಕೆಡಿಸಿಕೊಳ್ಳಲ್ಲ. ಗೋ ಬ್ಯಾಕ್ ಅಭಿಯಾನ ಮಾಮೂಲಿಯಾಗಿದೆ ಎಂದ ಅವರು, ಹಿರಿಯ ನಾಯಕರ ಕಾಲಿಗೆ ಬಿದ್ದಿದ್ದರೆ ನಾನೂ ಸಿಎಂ ಆಗುತ್ತಿದ್ದೆ ಎಂಬ ಯತ್ನಾಳ್ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
Advertisement
7ನೇ ವೇತನ ಆಯೋಗ ಜಾರಿ ವಿಚಾರವಾಗಿ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ. ಮಧ್ಯಂತರ ವರದಿ ಬಂದ ಕೂಡಲೇ ಜಾರಿಯಾಗುತ್ತದೆ. 2023-24ನೇ ಸಾಲಿನಲ್ಲಿಯೇ ಅನುಷ್ಠಾನಕ್ಕೆ ತರುತ್ತೇವೆ. ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಹಣ ತೆಗೆದಿಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: 7ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಪ್ರತಿಭಟನೆ – ನಾಳೆ ಸರ್ಕಾರಿ ಸೇವೆಯಲ್ಲಿ ವ್ಯತ್ಯಯ?