ಹುಬ್ಬಳ್ಳಿ: ಜಿನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಅಗತ್ಯವಿರುವ ಪರಿಣಿತ ವ್ಯವಸ್ಥೆಗಳ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಅವರು ಇಂದು ತಮ್ಮ ಹುಬ್ಬಳ್ಳಿ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಪರೀಕ್ಷೆಗೆ ಪ್ರಯೋಗಾಲಯಗಳಿವೆ. ಜಿನೋಮ್ ಸೀಕ್ವೆನ್ಸಿಂಗ್ ಗೆ ಪರಿಣಿತ ವ್ಯವಸ್ಥೆ ಅಗತ್ಯ. ಓಮಿಕ್ರಾನ್ ಬಂದಿದ್ದರಿಂದ ಸಂಶಯವಿದ್ದಲ್ಲಿ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ಎನ್.ಸಿ.ಬಿ.ಎಸ್‌ಗೆ ಕಳುಹಿಸಲಾಗುತ್ತಿದೆ. ಶೀಘ್ರದಲ್ಲಿ ಪರೀಕ್ಷೆಯ ವರದಿ ಬರಲಿದೆ, ಬರುವ ವ್ಯವಸ್ಥೆ ಆಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಆತಂಕ- ಯಾದಗಿರಿಯಲ್ಲಿ ಸಿದ್ಧವಾಯ್ತಿ ಹೈಟೆಕ್ ಐಸಿಯು ವಾರ್ಡ್
Advertisement
Advertisement
ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಮಾನವದಿನಗಳನ್ನು ಕಡಿತ ಮಾಡಿರುವ ಬಗ್ಗೆ ಸಿದ್ದರಾಮಯ್ಯ ಅವರು ಮಾಡಿರುವ ಆರೋಪದ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಈಗಾಗಲೇ ಕೆ.ಎಸ್.ಈಶ್ವರಪ್ಪ ಅವರು ಈ ಬಗ್ಗೆ ಉತ್ತರ ನೀಡಿದ್ದಾರೆ ಎಂದರು. ಇದನ್ನೂ ಓದಿ: ಕೆಂಪು ಟೋಪಿ ಧರಿಸಿದವರು ಉತ್ತರಪ್ರದೇಶಕ್ಕೆ ಅಪಾಯಕಾರಿ: ಮೋದಿ
Advertisement
Advertisement
ಬೊಮ್ಮಾಯಿ ಅವರು ಸುಳ್ಳು ಹೇಳುತ್ತಾರೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಬಗ್ಗೆ ನನಗೆ ಅಪಾರ ಗೌರವವಿತ್ತು. ಅವರ ಇತ್ತೀಚಿನ ಹೇಳಿಕೆಗಳು ನನಗೆ ನಿರಾಶೆ ಉಂಟು ಮಾಡಿದೆ ಎಂದರು.