ಶಿವಮೊಗ್ಗ: ವಕ್ಫ್ ಮಂಡಳಿ ವತಿಯಿಂದ ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು (College) ತೆರೆಯುವ ಬಗ್ಗೆ ಸರ್ಕಾರದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಜಿಲ್ಲೆಯ ಭದ್ರಾವತಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯುವ ಬಗ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದರು. ಇದು ಕೇವಲ ಹೇಳಿಕೆಯಾಗಿದ್ದು, ಈ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದರು. ಡಿ.3ರಂದು ಬೆಂಗಳೂರಿನಲ್ಲಿ ಗಣಿ ಹೂಡಿಕೆದಾರರ ಸಮಾವೇಶ : ಪ್ರಹ್ಲಾದ್ ಜೋಶಿ
Advertisement
Advertisement
ಹಿಜಬ್ ನಿರ್ಣಯದ ನಂತರ ಮುಸ್ಲಿಂ ಹೆಣ್ಣುಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂಬುದಕ್ಕೆ ಪ್ರತಿಕ್ರಿಯಿಸಿ, ಇದು ಸತ್ಯಕ್ಕೆ ದೂರವಾಗಿದ್ದು, ವಿದ್ಯಾರ್ಥಿನಿಯರ ಹಾಜರಾತಿ ಸಂಪೂರ್ಣವಾಗಿದೆ. ರಾಜ್ಯದ ಸಾಕ್ಷರತಾ ದರ ಹೆಚ್ಚಾಗಿದ್ದು, ಅಲ್ಪಸಂಖ್ಯಾತ ಹೆಣ್ಣುಮಕ್ಕಳು ಆಸಕ್ತಿಯಿಂದ ವಿದ್ಯೆ ಕಲಿಯುತ್ತಿದ್ದಾರೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸ್ಪಷ್ಟಪಡಿಸಿದರು. ನನ್ನನ್ನು ದೂಷಿಸಲು ಕಾಂಗ್ರೆಸ್ ಸ್ಪರ್ಧೆ ಏರ್ಪಡಿಸಿದೆ: ಮೋದಿ