Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಬೊಮ್ಮಾಯಿ

Bengaluru City

ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ: ಬೊಮ್ಮಾಯಿ

Public TV
Last updated: October 6, 2022 3:56 pm
Public TV
Share
3 Min Read
basavaraj bommai 6
SHARE

ಬೆಂಗಳೂರು: ಕರ್ನಾಟಕ (Karnataka) ಕೃಷಿ (Agriculture) ಕ್ಷೇತ್ರದ ಡಿಜಿಟಲೀಕರಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ. ಈವರೆಗೆ ರೈತರು, ಸರ್ವೇ ನಂಬರ್ ಹಾಗೂ ಆಧಾರ್‌ಗಳನ್ನು ಜೋಡಿಸಲಾಗಿದ್ದು, 78 ಲಕ್ಷ ರೈತರನ್ನು ಈ ವ್ಯಾಪಿಗೆ ತರಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ (Amit Shah) ಅವರ ಅಧ್ಯಕ್ಷತೆಯಲ್ಲಿ ಇಂದು ನೈಸರ್ಗಿಕ ‌ಕೃಷಿ ಮತ್ತು ಡಿಜಿಟಲ್ ಕೃಷಿ ಕುರಿತು ನಡೆದ ವೀಡಿಯೋ ಸಂವಾದದಲ್ಲಿ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡು ಮಾತನಾಡಿ, ಕೇಂದ್ರ ಕೃಷಿ ಪ್ರಧಾನ ಕಾರ್ಯದರ್ಶಿಗಳು ಕೃಷಿ ಡಿಜಿಟಲೀಕರಣದಲ್ಲಿ ಕರ್ನಾಟಕ ಮುಂದಿರುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, ಭೂಮಿ ತಂತ್ರಜ್ಞಾನದಡಿ ಈ ಹಿಂದೆಯೇ ಡಿಜಿಟಲೀಕರಣವಾಗಿದೆ. 62 ಲಕ್ಷ ಭೂಮಿಯುಳ್ಳ ಹಾಗೂ 16 ಲಕ್ಷ ಭೂ ರಹಿತರನ್ನೂ ತಂತ್ರಾಂಶದಲ್ಲಿ ಸೇರಿಸಲಾಗಿದೆ. ಫ್ರೂಟ್ಸ್ ಯೋಜನೆಯನ್ನು ಎಲ್ಲಾ ರಾಜ್ಯಗಳು ಅಳವಡಿಸಿಕೊಳ್ಳುತ್ತಿವೆ ಎಂದರು.

AMITH SHAH

ಈ ತಂತ್ರಾಂಶವನ್ನು ನಿರಂತರವಾಗಿ ಸುಧಾರಣೆ ಮಾಡಲಾಗುತ್ತಿದೆ. ಇದರ ಉಪಯೋಗ ಪಡೆದು ರೈತರನ್ನು ಜೋಡಿಸಲಾಗಿದೆ. ಕೇಂದ್ರ ಸರ್ಕಾರದ ಸ್ವಮಿತ್ವ ಯೋಜನೆಯನ್ನು ಕರ್ನಾಟಕದಲ್ಲಿ ಅಭಿಯಾನದ ರೀತಿಯಲ್ಲಿ ಕೈಗೊಂಡಿದೆ ಎಂದ ಅವರು, ಕೃಷಿ ಕ್ಷೇತ್ರದಲ್ಲಿ ನ್ಯಾನೋ ಯೂರಿಯಾ ಕ್ರಾಂತಿಯನ್ನು ಉಂಟುಮಾಡಿದ್ದು, ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನಲ್ಲಿದೆ. ಇದನ್ನು ಅಧ್ಯಯನ ಮಾಡಿ ರೈತರಿಗೂ‌ ಪರಿಚಯಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದಲ್ಲಿ ಉತ್ತಮ ಪ್ರತಿಕ್ರಿಯೆ ಹಾಗೂ ಬೆಂಬಲವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಡಿಜಿಟಲ್ ತಂತ್ರಜ್ಞಾನದ ಮೂಲಕ ರೈತರೇ ತಮ್ಮ ಭೂಮಿಯ ಸಮೀಕ್ಷೆ ಮಾಡುತ್ತಿದ್ದಾರೆ. ಈವರೆಗೆ 212 ಕೋಟಿ ಭೂಪ್ರದೇಶವನ್ನು ಡಿಜಿಟಲೀಕರಣಗೊಳಿಸಲಾಗಿದೆ. ಬೆಳೆ ಸಮೀಕ್ಷೆಯನ್ನು ರೈತರೇ ಮಾಡುತ್ತಿದ್ದಾರೆ. 212 ಕೋಟಿ ಪೈಕಿ 16,584 ಬೆಳೆಗಳನ್ನು ರೈತರೇ ಸಮೀಕ್ಷೆ ಮಾಡಿದ್ದಾರೆ. 1.61 ಕೋಟಿ ಪ್ರದೇಶವನ್ನು ಇಲಾಖೆ ಮಾಡಿದೆ. ಯಾವುದೇ ವ್ಯಾಜ್ಯಕ್ಕೆ ಎಡೆ ಮಾಡಿಕೊಡದಿರಲು ಶೇ. 100ರಷ್ಟು ರೈತರೇ ಸಮೀಕ್ಷೆ ಮಾಡಲು ಕ್ರಮ ವಹಿಸಲಾಗುತ್ತಿದೆ ಎಂದು ವಿವರಿಸಿದರು.

Agriculture 1

ನೈಸರ್ಗಿಕ ಕೃಷಿ ದೀರ್ಘಕಾಲಿಕ ಯೋಜನೆಯಾಗಿದ್ದು, ಈ ಕುರಿತು ಸಂಶೋಧನೆ ಹಾಗೂ ಪ್ರಮಾಣೀಕರಣ ಅತ್ಯಂತ ಪ್ರಮುಖ ಅಂಶಗಳು. ಪ್ರಧಾನಿ ನರೇಂದ್ರ ಮೋದಿಯವರ ರೈತರ ಆದಾಯ ದ್ವಿಗುಣಗೊಳಿಸುವ ಆಶಯದಂತೆ ಕರ್ನಾಟಕ ರಾಜ್ಯ ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳೊಂದಿಗೆ ನೈಸರ್ಗಿಕ ಕೃಷಿಯನ್ನು ಸಕ್ರಿಯವಾಗಿ ಕೈಗೊಂಡಿದೆ ಎಂದರು.

ರಾಜ್ಯದಲ್ಲಿ 5 ಕೃಷಿ ಹಾಗೂ ತೋಟಗಾರಿಕಾ ವಿಶ್ವವಿದ್ಯಾಲಯಗಳಿದ್ದು, ವಿಶ್ವವಿದ್ಯಾಲಯಗಳ ನಿರಂತರ ಮೇಲ್ವಿಚಾರಣೆಯಲ್ಲಿ ನೈಸರ್ಗಿಕ ಕೃಷಿಯನ್ನು ತಲಾ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಕೈಗೊಳ್ಳಲಾಗಿದೆ. ಬೆಳೆಗಳ ಗುಣಮಟ್ಟದಿಂದ ಹಿಡಿದು, ಉತ್ಪನ್ನ, ಪರೀಕ್ಷೆಗಳನ್ನು ಕೃಷಿ ಪ್ರಯೋಗಾಲಯದಲ್ಲಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ನೈಸರ್ಗಿಕ ಕೃಷಿಗೆ ಪರಿವರ್ತನೆ: ರಾಜ್ಯದಲ್ಲಿ 2.4 ಲಕ್ಷ ಎಕರೆ ಭೂಪ್ರದೇಶದಲ್ಲಿ ಕೈಗೊಂಡಿರುವ ಸಾವಯವ ಕೃಷಿ ಭೂಮಿಯನ್ನು ನೈಸರ್ಗಿಕ ಕೃಷಿಗೆ ಕ್ರಮೇಣ ಪರಿವರ್ತಿಸಲಾಗುತ್ತಿದೆ. ಮುಂದಿನ ಮಾರ್ಚ್‌ವೊಳಗೆ ಹೊಸದಾಗಿ 1 ಲಕ್ಷ ಎಕರೆ ಪ್ರದೇಶವನ್ನು ನೈಸರ್ಗಿಕ ಕೃಷಿಗೆ ಪರಿವರ್ತನೆ ಮಾಡಲು ಗುರಿ ನಿಗದಿ ಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೈಸರ್ಗಿಕ ಕೃಷಿಗೆ 41,434 ಕೃಷಿಕರನ್ನು ಆಯ್ಕೆ ಮಾಡಲಾಗಿದ್ದು, 1,100 ತರಬೇತಿ ಕಾರ್ಯಕ್ರಮಗಳು, 200 ಕ್ಷೇತ್ರ ಭೇಟಿಗಳನ್ನು ಕೈಗೊಂಡಿದೆ ಹಾಗೂ ಕಾರ್ಯಾಗಾರಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಯೋಜನೆಯನ್ನು ಮಿಷನ್ ಮಾದರಿಯಲ್ಲಿ ಕಾರ್ಯಾಗತ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಾಯಚೂರಿನಲ್ಲಿ ಪತ್ಯೇಕ ಎರಡು ಕೊಲೆ – ಬನ್ನಿ ಕೊಡುವ ನೆಪದಲ್ಲಿ ಪಿಡಿಓ ಹತ್ಯೆ

ನೈಸರ್ಗಿಕ ಕೃಷಿಯಲ್ಲಿ ವೈಜ್ಞಾನಿಕ ಅಂಶಗಳನ್ನು ಕೂಡ ಗಮನದಲ್ಲಿಟ್ಟುಕೊಂಡು ಮಣ್ಣಿನ ಫಲವತ್ತತೆ ಕಾಯ್ದುಕೊಳ್ಳಲು ಒತ್ತು ನೀಡಲಾಗಿದೆ. ಮಣ್ಣಿನಲ್ಲಿ ಸಾರಜನಕ ಹಾಗೂ ಕಾರ್ಬನ್ ಪ್ರಮಾಣ ಸೇರಿದಂತೆ ನೈಸರ್ಗಿಕ ಗೊಬ್ಬರ ಬಳಕೆಗೂ ಮಹತ್ವ ನೀಡಲಾಗಿದೆ. ಪೈಟೋಸೈನಾಸಿಸಿಸ್ ಪರಿಣಾಮದ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ ಎಂದರಲ್ಲದೆ ಈ ಕುರಿತಂತೆ ಅಧ್ಯಯನಗಳು ಉತ್ತಮ ಇಳುವರಿ ಹಾಗೂ ಉತ್ಪಾದನೆಗೆ ಎಡೆ ಮಾಡಿಕೊಡುತ್ತದೆ. ರೈತರು ಕೂಡ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ:  ಅಣ್ಣನ ಜೊತೆಗೆ ಗಾಳಿಪಟ ಹಾರಿಸುವಾಗ ಬಿಲ್ಡಿಂಗ್ ಮೇಲಿಂದ ಬಿದ್ದು ತಮ್ಮ ಸಾವು

Live Tv
[brid partner=56869869 player=32851 video=960834 autoplay=true]

TAGGED:Basavaraj Bommaiಕರ್ನಾಟಕಕೃಷಿಬಸವರಾಜ ಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
5 hours ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
5 hours ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
5 hours ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
5 hours ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
6 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?