ಬೆಂಗಳೂರು: ಮೆಟ್ರೋ (Metro) ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು, ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.
ಸುಭಾಷ್ ಚಂದ್ರ ಬೋಸ್ (Subhash Chandra Bose) ಅವರ ಜನ್ಮದಿನಾಚರಣೆಯ ಅಂಗವಾಗಿ ಸೋಮವಾರ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಬೊಮ್ಮಾಯಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ದೇಶ ನಿರ್ಮಿಸಲು ಸಂಕಲ್ಪಿತರಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಪ್ರತಿಜ್ಞೆ ಮಾಡಿದ್ದೇವೆ. ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ. ದೇಶಪ್ರೇಮ, ದೇಶ ಉಳಿಸುವುದು ಹಾಗೂ ದೇಶ ಕಟ್ಟುವ ವಿಚಾರದಲ್ಲಿ ಯಾವುದೇ ದುರ್ಬಲ ವಿಚಾರವಿರಬಾರದು ಎಂದಿದ್ದರು. ಅವರಿಗೆ ದಿಟ್ಟ, ಸ್ಪಷ್ಟ, ನಿಲುವಿತ್ತು ಎಂದು ಹೇಳಿದರು.
Advertisement
Advertisement
ಅಂದಿನ ಬ್ರಿಟಿಷರ ವಿರುದ್ಧ ನೇರವಾಗಿ ಯುದ್ಧ ಮಾಡಬೇಕೆಂಬ ವಿಚಾರ, ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ಕಾಂಗ್ರೆಸ್‌ನ ಹಲವು ದಿಗ್ಗಜರ ವಿರುದ್ಧ ಅವರು ತಮ್ಮ ವಿಚಾರಧಾರೆಯನ್ನು ಮಂಡಿಸಿದರು. ಕಾಂಗ್ರೆಸ್‌ಗಿಂತ (Congress) ವಿಭಿನ್ನ ವಿಚಾರಗಳಿದ್ದರಿಂದ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿಯೂ ಕೂಡ ಅಧಿಕೃತ ಅಭ್ಯರ್ಥಿ ವಿರುದ್ಧ ನಿಂತು ಜಯಶಾಲಿಯಾದರು ಎಂದರು.
Advertisement
Advertisement
ಅಪ್ಪಟ ದೇಶಪ್ರೇಮಿಯಾಗಿದ್ದ ಅವರು ಐಸಿಎಸ್ ಪದವಿಗೆ ಮರಳಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. ನೀವು ರಕ್ತವನ್ನು ಕೊಡಿ, ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ ಎಂದು ಯುವಕರಿಗೆ ಕರೆ ನೀಡಿದ್ದರು. ತಮ್ಮದೇ ಆದ ಆಜಾದ್ ಫೌಜ್ ಸ್ಥಾಪಿಸಿ ಇಡೀ ದೇಶದಲ್ಲಿ ಹೋರಾಟದ ಕಿಚ್ಚನ್ನು ಹಚ್ಚಿದ್ದರು. ಅವರ ವ್ಯಕ್ತಿತ್ವದಿಂದ ವಿದೇಶದಲ್ಲಿಯೂ ಕೂಡ ಭಾರತ ದೇಶದ ಸ್ವಾತಂತ್ರ್ಯದ ಬಗ್ಗೆ ಬಹಳ ಸದಾಭಿಪ್ರಾಯ ಮೂಡಲು ಸಾಧ್ಯವಾಯಿತು ಎಂದು ತಿಳಿಸಿದರು. ಇದನ್ನೂ ಓದಿ: ಸರ್ವಿಸ್ ಅಗೇನೆಸ್ಟ್ ಪೇಮೆಂಟ್, ಮೆನು ಕಾರ್ಡ್ ಹಿಡಿದುಕೊಂಡು ಡಿಕೆಶಿ ಓಡಾಡುತ್ತಾರೆ: ಅಶ್ವಥ್ ನಾರಾಯಣ್
ಸುಭಾಷ್ ಚಂದ್ರ ಬೋಸ್ ಅವರು ನಮಗೆ ಪ್ರೇರಣೆ. ಅಂದು ದೇಶಕ್ಕೆ ಸ್ವಾತಂತ್ರ್ಯ ಕೊಡಲು ಅವರು ಪ್ರೇರಣೆಯಾಗಿದ್ದರೆ, ಇಂದು ದೇಶ ಕಟ್ಟಲು ಪ್ರೇರಣೆಯಾಗಿದ್ದಾರೆ. ಅವರ ಸ್ಪಷ್ಟ, ಸಿದ್ಧಾಂತ ಹಾಗೂ ಆದರ್ಶಗಳನ್ನು ಮುಂದಿಟ್ಟುಕೊಂಡು ಸ್ವಾಭಿಮಾನಿ, ಸ್ವಾವಲಂಬಿ ದೇಶವನ್ನಾಗಿ ಮಾಡಲು ಸಾಧ್ಯವಿದೆ ಎಂದು ನಂಬಿದ್ದೇವೆ. ಆ ದಾರಿಯಲ್ಲಿ ನಾವೆಲ್ಲರೂ ಸೇರಿ ನಡೆಯಬೇಕಿದೆ ಎಂದು ನುಡಿದರು.
ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ರಾಜ್ಯದಲ್ಲಿ ಆಗುತ್ತಿದೆ. ಯುವಕರಿಗೆ ದೊಡ್ಡ ಪ್ರೇರಣೆ ನೀಡುವ ಕೆಲಸವಾಗುತ್ತಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯಗೆ ಪಾಕಿಸ್ತಾನವೇ ಸೇಫ್ ಜಾಗ: ಸಿಟಿ ರವಿ ವ್ಯಂಗ್ಯ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k