ಚಿತ್ರದುರ್ಗ: ಮಾಜಿ ಮಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ಕುಟುಂಬದ ರಿಮೋಟ್ ಕಂಟ್ರೋಲ್‍ನಲ್ಲಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗದ ಮುರುಘಾ ಮಠದಲ್ಲಿ ನಡೆದ ಮುರುಘಾ ಶರಣರ ಮೂರನೇ ದಶಮಾನೋತ್ಸವದ ಗುರುವಂದನಾ ಕಾರ್ಯಕ್ರಮದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘RSS ಕೈಲಿ ಸಿಎಂ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಆಗಿದ್ದಾರೆಂದು ಹೇಳಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದರು. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ
ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್ ಒಂದು ರಾಷ್ಟ್ರ ಕಟ್ಟುವ ಸಂಸ್ಥೆಯಾಗಿದ್ದೂ, ರಾಷ್ಟ್ರ ಕಟ್ಟುವ ಕೆಲಸಕ್ಕೆ ನನ್ನ ಸಮರ್ಪಣ ಭಾವನೆ ಇದೆ. ಹೀಗಾಗಿ ಸಿದ್ಧರಾಮಯ್ಯ ಹೇಳಿಕೆಗೆ ನಾನು ವಿರೋಧಿಸಲ್ಲ. ಯಾಕಂದ್ರೆ ಮಾಜಿ ಸಿಎಂ ಸಿದ್ಧರಾಮಯ್ಯ ಸಮಾಜವಾದಿ ಹಿನ್ನೆಲೆಯವರಾಗಿದ್ದಾರೆ. ಆದರೆ ಸಿದ್ಧರಾಮಯ್ಯ ಒಂದು ಕುಟುಂಬದ ರಿಮೋಟ್ ಕಂಟ್ರೋಲ್ ನಲ್ಲಿದ್ದಾರೆ. ಇದು ನನಗೆ ದುಖಃದ ವಿಚಾರ ಎಂದು ಕುಟುಕಿದರು. ಈ ವೇಳೆ ಸಿಎಂ ಜೊತೆ ಶಾಸಕರಾದ ತಿಪ್ಪಾರೆಡ್ಡಿ, ಚಂದ್ರಪ್ಪ ಇದ್ದರು. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!