ಬೆಳಗಾವಿ: ರಾಮನಗರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿ ನಿನ್ನೆ ನಡೆದಿತ್ತು. ಈ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾತನಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದಿರುವ ಘಟನೆ ಇದು ನಮ್ಮ ಕರ್ನಾಟಕ ಸಂಸ್ಕೃತಿ ಅಲ್ಲ. ನಮ್ಮ ಮಧ್ಯೆ ಏನೇ ಇದ್ದರೂ ಮಾತಿನಿಂದ ವಿಚಾರಗಳನ್ನು ಹೇಳಿಕೊಳ್ಳಬಹುದೇ ಹೊರತಾಗಿ, ಇಂತಹ ವರ್ತನೆ ಯಾರಿಗೂ ಶೋಭೆ ತರುವಂತದ್ದಲ್ಲ. ನಾನು ನಿನ್ನೆ ಈ ಮಾತನ್ನು ಅಲ್ಲಿಯೇ ಹೇಳಿದ್ದೇನೆ ಎಂದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್, ಅಶ್ವಥ್ ನಾರಾಯಣ ನಡುವೆ ಜಟಾಪಟಿ
Advertisement
Advertisement
ನಡೆದಿದ್ದೇನು?: ಬಸವರಾಜ ಬೊಮ್ಮಾಯಿ ಅವರು ರಾಮನಗರ-ಮಾಗಡಿ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹಾಗೂ ಬಿಜೆಪಿಯ ಸಚಿವರ ನಡುವೆ ಜಟಾಪಟಿ ನಡೆದಿತ್ತು. ಸಿಎಂ ಕಾರ್ಯಕ್ರಮದಲ್ಲಿ ಕಾಂಗ್ರೆಸ್‍ನ ಸ್ಥಳೀಯರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿ ವೇದಿಕೆಯಲ್ಲೇ ಗಲಾಟೆ ಮಾಡಿದ್ದರು. ರಾಮನಗರ ಡಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಎಂಎಲ್‍ಸಿ ಎಸ್.ರವಿ ಬರುವ ಪಾಲ್ಗೊಳ್ಳುವ ಮುನ್ನವೇ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಗೊಳಿಸಿದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ತೆಗೆದಿದ್ದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್
Advertisement
Advertisement
ಸ್ಥಳೀಯ ಪ್ರತಿನಿಧಿಗಳು ಬರುವ ಮೊದಲೇ ಪ್ರತಿಮೆ ಅನಾವರಣಗೊಳಿಸಿದ ಸಿಎಂ ನಡೆಯನ್ನು ಸಂಸದ ಡಿ.ಕೆ.ಸುರೇಶ್ ವಿರೋಧಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು, ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. ನಂತರ ಸಿಎಂ ಕಾರ್ಯಕ್ರಮದಲ್ಲಿ ಡಿ.ಕೆ.ಸುರೇಶ್ ಪರ ಜೈಕಾರ ಕೂಗುವ ಮೂಲಕ ಗದ್ದಲ ಸೃಷ್ಟಿಸಲಾಯಿತು. ಅಲ್ಲದೇ ಕಾಂಗ್ರೆಸ್ ಕಾರ್ಯಕರ್ತರು ಸಿಎಂಗೆ ಧಿಕ್ಕಾರ ಕೂಗಿದ್ದರು. ಇದನ್ನೂ ಓದಿ: ರಾಮನಗರ ಶಾಂತಿಯ ಜಿಲ್ಲೆ, ಗೂಂಡಾ ರೀತಿಯ ವರ್ತನೆ ಮಾಡಿದ್ದು ತಪ್ಪು: ಎಚ್‍ಡಿಕೆ ಕಿಡಿ
ಸಿಎಂ ವೇದಿಕೆಗೆ ಬರುತ್ತಿದಂತೆ ಕಪ್ಪು ಪಟ್ಟಿ ಪ್ರದರ್ಶಿಸಿ, ಅಂಬೇಡ್ಕರ್ ಪ್ರತಿಮೆಗೆ ಸಂಸದ ಡಿ.ಕೆ.ಸುರೇಶ್ ಅವರಿಂದ ಪುಷ್ಪಾರ್ಚನೆ ಮಾಡಿಸಿಲ್ಲ ಎಂದು ಧಿಕ್ಕಾರ ಕೂಗಿದ್ದರು. ಇದು ಸರ್ಕಾರಿ ಕಾರ್ಯಕ್ರಮವಲ್ಲ RSS ಕಾರ್ಯಕ್ರಮ ಎಂದು ಆಕ್ರೋಶ ಹೊರಹಾಕಿದ್ದರು. ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ಕಾರ್ಯಕರ್ತರ ಮನವೊಲಿಸಲು ಪೊಲೀಸರು ಮುಂದಾದರು. ಪೊಲೀಸರ ಮಾತಿಗೂ ಜಗ್ಗದೇ ದಲಿತ ಸಂಘಟನೆಗಳ ಮುಖಂಡರು ಸಿಎಂ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.