ಹುಬ್ಬಳ್ಳಿ: ಕೋವಿಡ್ ವಾರಿಯರ್‌ಗಳಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂಸ್ಟರ್ ಡೋಸ್ ಕುರಿತು ಟಾಸ್ಕ್‌ಫೋರ್ಸ್‌ನಲ್ಲಿ ಚರ್ಚೆ ಮಾಡಲಿದ್ದೇವೆ. ಒಂದು ಡೋಸ್ ಅನ್ನು ಎನ್‌ಸಿಬಿಎಸ್‌ಗೆ ಕಳುಹಿಸಲಾಗಿದೆ. ಅದರ ವರದಿ ಬಂದ ನಂತರ ಬೂಸ್ಟರ್ ಡೋಸ್ ನೀಡುವ ಬಗ್ಗೆ ತೀರ್ಮಾನಿಸಲಾಗುವುದು. ಕೋವಿಡ್ ಲಸಿಕೆ ಕಡ್ಡಾಯವಲ್ಲ. ಆದರೆ ಲಸಿಕಾಕರಣವನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಓಮಿಕ್ರಾನ್ ಹಾಗೂ ಡೆಲ್ಟಾ ವೈರಸ್ ನಡುವಿನ ವ್ಯತ್ಯಾಸವೇನು?
Advertisement
Advertisement
ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರ ಮೇಲೆ ಒಂದು ವಾರಗಳ ಕಾಲ ನಿಗಾವಹಿಸಲಾಗುವುದು. ವಿದೇಶ ಹಾಗೂ ಕೇರಳದಿಂದ ಬಂದವರ ಮೇಲೆ ನಿಗಾವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ವಿದೇಶದಿಂದ ಬರುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಲಾಗುವುದು ಎಂದರು.
Advertisement
ಹಾವೇರಿಯಲ್ಲಿ ಬಂಡಾಯ ಅಭ್ಯರ್ಥಿ ಕಣಕ್ಕಿಳಿದಿರುವ ವಿಚಾರವಾಗಿ ಪ್ರತಿಕ್ರಿಯಿಸಿ, ಅವರು ಬಿಜೆಪಿಯವರಲ್ಲ. ಒಮ್ಮೆ ಕಾಂಗ್ರೆಸ್ ಅಂತಾರೆ, ಇನ್ನೊಮ್ಮೆ ಬಿಜೆಪಿ ಅಭ್ಯರ್ಥಿ ಅಂತಾರೆ. ನಮ್ಮ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಕಣದಲ್ಲಿ ಇದ್ದಾರೆ. ಎಚ್.ಡಿ.ದೇವೇಗೌಡರು ಪ್ರಧಾನಿ ಮೋದಿ ಅವರನ್ನು ದೆಹಲಿಯಲ್ಲಿ ನಿನ್ನೆ ಭೇಟಿಯಾಗಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ. ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಚರ್ಚಿಸಿ ಮೈತ್ರಿ ವಿಚಾರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 2 ಡೋಸ್ ಪಡೆದವರಿಗೆ ಚಿಕಿತ್ಸೆ – ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಿ
Advertisement
ರಾಜ್ಯದಲ್ಲಿ ಲಾಕ್‌ಡೌನ್ ಕುರಿತು ಮಾತನಾಡಿ, ಲಾಕ್‌ಡೌನ್ ಪ್ರಸ್ತಾಪ ಇಲ್ಲ. ಕ್ರಿಸ್ಮಸ್ ಹಾಗೂ ಹೊಸ ವರ್ಷ ಸಂಭ್ರಮಾಚರಣೆ ವೇಳೆ ನಿರ್ಬಂಧ ಹೇರುವ ಬಗ್ಗೆ ತೀರ್ಮಾನ ಮಾಡಿಲ್ಲ. ಜನರು ಭಯಭೀತರಾಗಬಾರದು ಎಂದು ಸ್ಪಷ್ಟಪಡಿಸಿದರು.