ನೂರು ದಿನಗಳ ಆಡಳಿತಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ: ಬಸವರಾಜ ಬೊಮ್ಮಾಯಿ

Public TV
2 Min Read
bommai modi

ನವದೆಹಲಿ: ರಾಜ್ಯದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡಿರುವ ಹಲವು ಸುಧಾರಣಾ ಕ್ರಮಗಳು ಹಾಗೂ ನೂತನ ಯೋಜನೆಗಳ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತೃಪ್ತಿ ಹಾಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

bommai modi1

ನವ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿಯಾದ ನಂತರ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಭೇಟಿಯ ಸಂದರ್ಭದಲ್ಲಿ ಕಳೆದ ನೂರು ದಿನಗಳಲ್ಲಿ ಕೈಗೊಂಡ ಸುಧಾರಣಾ ಕ್ರಮಗಳ ಬಗ್ಗೆ ಹಾಗೂ ನೂತನ ಕಾರ್ಯಕ್ರಮಗಳ ಬಗ್ಗೆ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಈ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿಯವರು ಕೆಲವು ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಕುರಿತಂತೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು ಎಂದು ಹೇಳಿದರು. ಇದನ್ನೂ ಓದಿ: ಇದು ಹುಚ್ಚುತನವೋ ಅಥವಾ ದೇಶದ್ರೋಹವೋ – ಕಂಗನಾ ವಿರುದ್ಧ ವರುಣ್ ಗಾಂಧಿ ಕಿಡಿ

ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಹಾಗೂ ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ಮಾಡುವ ಮೂಲಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಇನ್ನಷ್ಟು ಪಾರದರ್ಶಕತೆ ತರುವ ಕ್ರಮಗಳನ್ನು ಪ್ರಧಾನಿಗಳು ಶ್ಲಾಘಿಸಿದರು. ರೈತ ವಿದ್ಯಾನಿಧಿ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಬೇಕು. ಏಕೆಂದರೆ ಡಿಜಿಟಲ್ ವೇದಿಕೆಯಲ್ಲಿ ರಾಜ್ಯದ ಎಲ್ಲ ರೈತರ ಮಾಹಿತಿ ಲಭ್ಯವಿದೆ. ರಾಜ್ಯದ ಯಶಸ್ಸನ್ನು ಗಮನಿಸಿ ಇತರ ರಾಜ್ಯಗಳಿಗೆ ಈ ಯೋಜನೆ ವಿಸ್ತರಿಸಲು ಚಿಂತನೆ ನಡೆಸಲಾಗುವುದೆಂದು ಮೋದಿ ಅವರು ತಿಳಿಸಿದ್ದಾರೆ. ಕೆಲವರಿಗೆ ಮಾತ್ರ ಟೆಂಡರ್ ದೊರೆಯುವ ಉದ್ದೇಶಕ್ಕೆ ನಿರ್ದಿಷ್ಟ ಷರತ್ತುಗಳನ್ನು ವಿಧಿಸುವಂತಹ ಪರಿಪಾಠಗಳಿಗೆ ಕಡಿವಾಣ ಹಾಕಲು ಕೆಟಿಪಿಪಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಒಂದು ದಿಟ್ಟ ನಿರ್ಧಾರ. ಎಲ್ಲ ಇಲಾಖೆಗಳಲ್ಲಿಯೂ ಇದನ್ನು ಜಾರಿಗೊಳಿಸುವಂತೆ ಸಲಹೆ ನೀಡಿದ್ದಾರೆಂದು ಸಿಎಂ ಮಾಹಿತಿ ನೀಡಿದರು.

raitha vidhya nidhi

ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಪ್ರಗತಿಯ ಕುರಿತು ಮಾಹಿತಿ ಪಡೆದ ಪ್ರಧಾನಿಯವರು ವಿಶ್ವವಿದ್ಯಾಲಯಗಳು, ಶಿಕ್ಷಕರು, ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಸ ನೀತಿಯನ್ನು ಅನುಷ್ಠಾನಗೊಳಿಸುವಂತೆ ಸಲಹೆ ನೀಡಿದರು. ಅಮೃತ ಯೋಜನೆಗಳ ಕುರಿತು ಹರ್ಷ ವ್ಯಕ್ತಪಡಿಸಿ, ಗ್ರಾಮ ಪಂಚಾಯಿತಿಗಳ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಂಯೋಜನೆಗೊಳಿಸಿ, ಕ್ರಮ ಕೈಗೊಳ್ಳುವಂತೆ ಹಾಗೂ ಇದರ ಮೇಲ್ವಿಚಾರಣೆಗೆ ಹಿರಿಯ ಅಧಿಕಾರಿಯ ನೇಮಕ ಮಾಡುವಂತೆ ತಿಳಿಸಿದ್ದಾರೆ. ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯೊಂದಿಗೆ ಸಂಯೋಜನೆ ಮಾಡಬೇಕು. ಇದರೊಂದಿಗೆ ಕೌಶಲ್ಯ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಬಲೀಕರಣ ಮೊದಲಾದ ವಿಷಯಗಳ ಕುರಿತು ಚರ್ಚಿಸಲಾಯಿತು ಎಂದರು. ಇದನ್ನೂ ಓದಿ: ರಣವೀರ್ ಸ್ಟೈಲ್ ಡ್ಯಾನ್ಸ್ ಕಾಪಿ ಮಾಡಿದ ಶಿಲ್ಪಾ ಶೆಟ್ಟಿ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಹೆಣ್ಣುಮಕ್ಕಳ ಆರ್ಥಿಕ ಸಬಲೀಕರಣಕ್ಕೆ ನೆರವು ನೀಡಲು ಬ್ಯಾಂಕುಗಳು ಹೆಚ್ಚಿನ ಉತ್ಸುಕತೆ ತೋರದಿರುವ ಬಗ್ಗೆ ಪ್ರಧಾನಿಯವರ ಗಮನ ಸೆಳೆಯಲಾಗಿದೆ. ಹೆಣ್ಣುಮಕ್ಕಳಿಗೆ ಹೆಚ್ಚಿನ ನೆರವು ನೀಡುವಂತೆ ಬ್ಯಾಂಕುಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಸಂಶೋಧನೆ ಮತ್ತು ಅಭಿವೃದ್ಧಿ ನೀತಿ, ಉದ್ಯೋಗ ನೀತಿ ಮೊದಲಾದವುಗಳ ಕುರಿತೂ ಸಹ ಪಿಎಂ ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ಖುಷಿ ವ್ಯಕ್ತಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *