ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿ ಬಂದಿರುವ 60% ಕಮಿಷನ್ ಆರೋಪವನ್ನೂ ಸೇರಿಸಿ ಎಸ್‌ಐಟಿ (Special Investigation Team) ತನಿಖೆಗೆ ವಹಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಆಗ್ರಹಿಸಿದರು.
ರಾಜ್ಯ ಸರ್ಕಾರದ 40% ಕಮಿಷನ್ ಆರೋಪದ ತನಿಖೆಗೆ ಎಸ್‌ಐಟಿ ರಚಿಸಲು ತೀರ್ಮಾನಿಸಿರುವ ಕುರಿತು ಬೆಂಗಳೂರಿನಲ್ಲಿ (Bengaluru) ಮಾಧ್ಯಮದವರೊಂದಿಗೆ ಮಾತನಾಡಿದರು. 40% ಭ್ರಷ್ಟಾಚಾರದ ಬಗ್ಗೆ ಸುಳ್ಳು ಅಪಪ್ರಚಾರ ಮಾಡಿದ ಪ್ರಕರಣಕ್ಕೆ ಈಗಾಗಲೇ ಆಯೋಗ ರಚನೆ ಮಾಡಿದ್ದರು. ಆ ಕಮಿಷನ್ ವರದಿಯಲ್ಲಿ ಏನಿದೆ ಎನ್ನುವುದು ಸಾರ್ವಜನಿಕರಿಗೆ ಗೊತ್ತಾಗಬೇಕು. ಈ ಸರ್ಕಾರ ಕದ್ದು ಮುಚ್ಚಿ ಯಾಕೆ ಮಾಡುತ್ತಾರೆ. ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ವಿರುದ್ಧ 60% ಆರೋಪ ಕೇಳಿ ಬಂದಿದೆ. ಅದನ್ನೂ ಸೇರಿಸಿ ಎಸ್‌ಐಟಿ ತನಿಖೆಗೆ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: IPL 2025 | ಗುಜರಾತ್‌ಗೆ ಮಾರ್ಕ್ರಮ್, ಪೂರನ್ ಪಂಚ್ – ಲಕ್ನೋಗೆ 6 ವಿಕೆಟ್‌ಗಳ ಸೂಪರ್ ಜಯ
ರಾಜ್ಯ ಸರ್ಕಾರದಲ್ಲಿ 60% ಭ್ರಷ್ಟಾಚಾರ (Corruption) ನಡೆಯುತ್ತಿದೆ ಎಂದು ಪಿಡಬ್ಲೂಡಿ, ಅಬಕಾರಿ, ಎಲೆಕ್ಟ್ರಿಕ್ ಕಂಟ್ರಾಕ್ಟರ್ ಅಸೋಸಿಯೇಷನ್‌ನವರು ಬಹಿರಂಗ ಆರೋಪ ಮಾಡಿದ್ದಾರೆ. ತಮ್ಮ ಸರ್ಕಾರದಲ್ಲಿ ನಡೆದಿರುವ ಆರೋಪದ ಸಮೇತ ತನಿಖೆ ಮಾಡಬೇಕು. ರಾಜಕಿಯ ದ್ವೇಷದಿಂದ ನಮ್ಮ ಮೇಲೆ ಸುಳ್ಳು ಪ್ರಚಾರ ಮಾಡಿರುವುದಕ್ಕೆ ಎಲ್ಲಿ ದಾಖಲೆ ಸಿಗುತ್ತದೆ. ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ಕಂಪ್ಲೆAಟ್ ಕೊಡಿ ಎಂದು ಈಗ ಸಿಎಂ ಹಾಗೂ ಡಿಸಿಎಂ ಅವರು ಹೇಳುತ್ತಾರೆ. ನಾವು ಇದ್ದಾಗಲೂ ಲೋಕಾಯುಕ್ತಕ್ಕೆ ದೂರು ಕೊಡಿ ಅಂತ ಹೇಳಿದ್ದೆ ಕೊಡಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೆಎಲ್ ರಾಹುಲ್ ಬ್ಯಾಟಿಂಗ್ ಅಂದ್ರೆ ತುಂಬಾನೇ ಇಷ್ಟ: ಶಿವಣ್ಣ
ಗುತ್ತಿಗೆದಾರರು ಮಾಡಿರುವ ಕಾಮಗಾರಿಗೆ ಹಿರಿತನದ ಆಧಾರದಲ್ಲಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿ, ಮಾಡಿದ ಕೆಲಸಕ್ಕೆ ಕೊಡಲು ಹಣ ಇಲ್ಲ. ಹೀಗಾಗಿ ಗುತ್ತಿಗೆದಾರರು ಟೆಂಡರ್ ಆಗಿದ್ದರೂ ಕೆಲಸ ಮಾಡಲು ಮುಂದೆ ಬರುತ್ತಿಲ್ಲ ಎಂದು ಹೇಳಿದರು.
ಜಾತಿಗಣತಿ ರಾಜಕಾರಣ
ಈ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಜಾತಿಗಣತಿ (Caste Census) ರಾಜಕಾರಣ ಮಾಡುತ್ತಿದೆ. ಮೊದಲೇ ಗಣತಿ ಮಾಡುವ ಮುಂಚೆ ಜಾತಿಗಣತಿ ಅಂತ ಆದೇಶ ಮಾಡಬೇಕಿತ್ತು. ಸಾಮಾಜಿಕ ಆರ್ಥಿಕ ಸಮೀಕ್ಷೆ ಅಂತ ಹೇಳಿ ಜಾತಿ ಬರೆಸಿಕೊಂಡು ಬಂದಿದ್ದಾರೆ. ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರು ಕೊಟ್ಟ ವರದಿಗೆ ಕಾರ್ಯದರ್ಶಿ, ಸದಸ್ಯರು ಸಹಿ ಹಾಕಿಲ್ಲ. ಇನ್ಬೊಬ್ಬ ಅಧ್ಯಕ್ಷರು ಅದಕ್ಕೆ ತೇಪೆ ಹಚ್ಚಿರುವ ವರದಿ ನೀಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಮದ್ಯ ಖರೀದಿಗೆ ಹಣ ಕೊಡಲಿಲ್ಲ ಅಂತ ತಂದೆಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಮಗ
ಈ ಸರ್ಕಾರಕ್ಕೆ ಹಿಂದುಳಿದ ವರ್ಗದವರ ಬಗ್ಗೆ ಕಾಳಜಿ ಇದ್ದರೆ ವರದಿಯನ್ನು ಬಹಿರಂಗ ಮಾಡಿ, ಅವರಿಗಾಗಿ ಏನು ಯೋಜನೆ ಮಾಡುತ್ತಾರೆ ಅದನ್ನು ಹೇಳಬೇಕು. ನಿನ್ನೆಯ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದರು. ಈಗ ಮತ್ತೆ ಮುಂದಿನ ಸಂಪುಟದಲ್ಲಿ ಚರ್ಚಿಸುವುದಾಗಿ ತಿಳಿಸಿದ್ದಾರೆ. ಅದರ ಅಧ್ಯಯನಕ್ಕೆ ಮತ್ತೊಂದು ಸಂಪುಟ ಉಪಸಮಿತಿ ಮಾಡುತ್ತಾರೆ. ಮುಖ್ಯಮಂತ್ರಿಗಳು ಹಿಂದುಳಿದವರ ಬಗ್ಗೆ ಬರೀ ಭಾಷಣ ಮಾಡುವುದರಿಂದ ಹೊಟ್ಟೆ ತುಂಬಲ್ಲ. ಮುಖ್ಯಮಂತ್ರಿಗಳು ಸುಮಾರು ಮೂರ್ನಾಲ್ಕು ವರ್ಷದಿಂದ ಅದನ್ನೇ ಇಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕಮಿಟ್‌ಮೆಂಟ್ ಇಲ್ಲ. ಎಲ್ಲಿ ಕಮಿಟ್‌ಮೆಂಟ್ ಇರುವುದಿಲ್ಲವೋ ಅಲ್ಲಿ ಕಮಿಟಿ ನೇಮಕ ಆಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.