– ಯತ್ನಾಳ್ ವಿಚಾರ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ
ನವದೆಹಲಿ: ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಣಯವನ್ನು ನಾವೆಲ್ಲರೂ ಪಾಲಿಸಬೇಕಾಗುತ್ತದೆ. ಬರುವಂತಹ ದಿನಗಳಲ್ಲಿ ಪಕ್ಷಕ್ಕೆ ಯಾವುದೇ ರೀತಿಯ ನಷ್ಟವಾಗದ ರೀತಿಯಲ್ಲಿ ನಾವು ನಡೆದುಕೊಳ್ಳಬೇಕಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ನವದೆಹಲಿಯಲ್ಲಿ (New Delhi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ವಿಷಯದ ಬಗ್ಗೆ ವರಿಷ್ಠರ ಜೊತೆ ಚರ್ಚಿಸಿ ಮಾತನಾಡುತ್ತೇನೆ. ನಾವು ಸಂಜೆ 6 ಗಂಟೆವರೆಗೂ ಸಂಸತ್ತಿನಲ್ಲಿ ಇದ್ದೆವು. ಅಲ್ಲಿಂದ ಹೊರಗೆ ಬಂದಾಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಉಚ್ಚಾಟನೆಯ ಸುದ್ದಿ ಕೇಳಿ ಬಂದಿತು. ಬಿಜೆಪಿ ಒಂದು ರಾಷ್ಟ್ರೀಯ ಪಕ್ಷ ತನ್ನದೇ ಆದ ನೀತಿ ನಿರ್ಧಾರಗಳನ್ನು ಹಾಕಿಕೊಂಡಿರುವ ಪಕ್ಷ. ಕರ್ನಾಟಕದ ವಿಚಾರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಹೈಕಮಾಂಡ್ ಎಲ್ಲರನ್ನೂ ಕರೆದು ಮಾತನಾಡಿಸಿ ಒಗ್ಗೂಡಿಸುವ ಪ್ರಯತ್ನ ಮಾಡಿದೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಶುರು
ಈಗ ಶಿಸ್ತು ಮುಖ್ಯ ಎಂದು ಒಂದು ಕಾಲಘಟ್ಟಕ್ಕೆ ಬಂದಿರುವುದರಿಂದ ಕೆಲವರಿಗೆ ನೋಟಿಸ್ ಕೊಟ್ಟಿದ್ದಾರೆ. ಕೆಲವರ ಮೇಲೆ ಕ್ರಮ ಕೈಗೊಂಡಿದ್ದಾರೆ. ಈ ವಿಚಾರವಾಗಿ ಏನೆಲ್ಲಾ ಇದೆ ಎಂದು ವರಿಷ್ಠರನ್ನು ಭೇಟಿ ಮಾಡಿಲ್ಲ. ಆದಷ್ಟು ಎಲ್ಲರನ್ನೂ ಒಂದುಗೂಡಿಸಿ ಕರೆದುಕೊಂಡು ಹೋಗುವುದು ಇಂದಿನ ಅನಿವಾರ್ಯತೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಯತ್ನಾಳ್ ಉಚ್ಛಾಟನೆ – ವಿಜಯಪುರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
ಶಾಸಕ ಯತ್ನಾಳ್ ಅವರಿಗೆ ಎರಡು ಬಾರಿ ನೋಟಿಸ್ ಕೊಟ್ಟಿದ್ದರು. ಅವರು ಅದಕ್ಕೆ ಉತ್ತರ ಕೊಟ್ಟಿದ್ದರು. ಆದರೆ, ಅವರು ಏನು ಉತ್ತರ ಕೊಟ್ಟಿದ್ದರು ಎಂದು ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಕೊಳ್ಳುತ್ತೇನೆ. ಇಂತಹ ಕಾಲದಲ್ಲಿ ಒಗ್ಗಟ್ಟಾಗಿ ಹೋಗುವ ಅವಶ್ಯಕತೆ ಇದೆ ಎಂದರು. ಇದನ್ನೂ ಓದಿ: ಜಾತಿ ಕೇಳಿ, ಮತ ಬ್ಯಾಂಕಿನಡಿ ಮಣೆ ಹಾಕುವುದು ಕಾಂಗ್ರೆಸ್ಸಿನ ನೀತಿ, ಮೋದಿ ನೀತಿಯಲ್ಲ: ಈದ್ ಕಿಟ್ ಟೀಕೆಗೆ ಸಿ.ಟಿ.ರವಿ ಟಕ್ಕರ್
ಯತ್ನಾಳ್ ಅವರನ್ನು ಭೇಟಿ ಮಾಡಿದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಅವರ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಆಮೇಲೆ ಭೇಟಿಯಾಗಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್
ಪಕ್ಷದಲ್ಲಿ ಇನ್ನಷ್ಟು ಜನರಿಗೆ ನೋಟಿಸ್ ನೀಡಿರುವ ಕುರಿತು ಮಾತನಾಡಿದ ಅವರು, ಉಳಿದವರಿಗೂ ನೋಟಿಸ್ ಕೊಟ್ಟಿದ್ದು, ಅವರು ಏನು ಉತ್ತರ ಕೊಡುತ್ತಾರೆ ಎನ್ನುವುದರ ಮೇಲೆ ಶಿಸ್ತು ಸಮಿತಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತದೆ. ಪಕ್ಷದ ಶಿಸ್ತು ಸಮಿತಿಗೆ ತನ್ನದೇ ಆದ ನಿಯಮಗಳಿವೆ ಎಂದು ಹೇಳಿದರು. ಇದನ್ನೂ ಓದಿ: ದೆಹಲಿಯಲ್ಲಿ ಹೆಚ್‌ಡಿಕೆ ಜೊತೆ ಜಾರಕಿಹೊಳಿ ಸಭೆ