ಬೆಳಗಾವಿ: ರಾಜ್ಯದಲ್ಲಿ ಕೆಲವೆಡೆ ಅತಿವೃಷ್ಠಿಯಿಂದ ಮನೆಗಳ ಹಾನಿ ಹಾಗೂ ಜಾನುವಾರುಗಳ ಸಾವು ದೊಡ್ಡ ಪ್ರಮಾಣದಲ್ಲಿ ಆಗಿದೆ. ಸುಮಾರು 11 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಇದೆ. ಉಳಿದ ಜಿಲ್ಲೆಗಳಲ್ಲಿ ಬರದ ಛಾಯೆ ಇದೆ. ಆದರೂ ರಾಜ್ಯ ಸರ್ಕಾರ ಗಮನಿಸುತ್ತಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅಸಮಾಧಾನ ಹೊರಹಾಕಿದರು.
ಬೆಳಗಾವಿಯ (Belagavi) ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳು ವೀಡಿಯೋ ಸಂವಾದ ಮಾಡುವುದು ಬಿಟ್ಟರೆ ಮಳೆಯಿಂದ ಆದ ಹಾನಿಗೆ ಯಾವುದೇ ಪರಿಹಾರ ಕಾರ್ಯ ನಡೆದಿಲ್ಲ. ಮನೆ ಕಳೆದುಕೊಂಡವರಿಗೆ ತಕ್ಷಣವೇ 10 ಸಾವಿರ ರೂ. ಪರಿಹಾರ ಕೊಡಬೇಕು, ಆದರೆ ಅದು ಆಗಿಲ್ಲ. ಬೆಳೆ ನಾಶ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಆಗಿಲ್ಲ. ದೊಡ್ಡ ಪ್ರಮಾಣದಲ್ಲಿ ಪ್ರಾಣಹಾನಿ ಆಗಿದೆ. ಸರ್ಕಾರ ಹಾಗೂ ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಗ್ರೆನೇಡ್ ಮೇಲಿನ ಮೇಡ್ ಇನ್ ವಿವರವನ್ನೇ ಅಳಿಸಿ ಹಾಕಿರುವ ಶಂಕಿತ ಉಗ್ರರು
Advertisement
Advertisement
ಇನ್ನೂ ಬರಪೀಡಿತ ಪ್ರದೇಶಗಳಿಗೆ ಬೇರೆ ಬೆಳೆ ಬೆಳೆಯಲು ಬೀಜ, ಗೊಬ್ಬರ ಕೊಡುವ ವ್ಯವಸ್ಥೆ ಆಗಿಲ್ಲ. ಸರ್ಕಾರದವರು ಕೇವಲ ರಾಜಕಾರಣದಲ್ಲಿ ನಿರತರಾಗಿದ್ದಾರೆ. ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಸಚಿವರು ಹಾಗೂ ಶಾಸಕರ ನಡುವೆ ಇರುವ ಸಮರ ಬಗೆಹರಿಸಲು ಮುಖ್ಯಮಂತ್ರಿಗಳು ಸಮಯ ಕಳೆಯುತ್ತಿದ್ದಾರೆ. ರಾಜ್ಯದ ಜನರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಅವರ ನೆರವಿಗೆ ಸರ್ಕಾರ ಧಾವಿಸಿಲ್ಲ. ಕೂಡಲೇ ಎಲ್ಲಾ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಡಬೇಕು. ಸಾವು-ನೋವಾದ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement
ನಮ್ಮ ಸರ್ಕಾರದ (BJP) ಅವಧಿಯಲ್ಲಿ ಪೂರ್ಣ ಮನೆ ಬಿದ್ದವರಿಗೆ 5 ಲಕ್ಷ ರೂ. ಪರಿಹಾರ ನೀಡಿದ್ದೇವೆ. ಆ ರೀತಿಯ ಮಾನದಂಡ ಅನುಸರಿಸಿ ಈಗಲೂ ಪರಿಹಾರ ನೀಡಬೇಕು. ತಕ್ಷಣವೇ ಸಂತ್ರಸ್ತರಿಗೆ 10 ಸಾವಿರ ರೂ. ಪರಿಹಾರ ಕೊಡಬೇಕು. ಕೇಂದ್ರ ಸರ್ಕಾರದ ಜೊತೆಗೆ ರಾಜ್ಯ ಸರ್ಕಾರ ಬೆಲೆ ಪರಿಹಾರವನ್ನು ಬಿಜೆಪಿ ಸರ್ಕಾರ ಇದ್ದಾಗ ಕೊಟ್ಟಂತೆ ಈಗಲೂ ಕೊಡಬೇಕು. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಅಧಿಕಾರಿಗಳಿಗೆ ಸೂಚನೆ ನೀಡಬೇಕು. ನನ್ನ ಅನುಭವದಿಂದ ಹೇಳುತ್ತಿದ್ದೇನೆ. ತಕ್ಷಣವೇ ಮಂತ್ರಿಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು. ಆಗದಿದ್ದರೆ ಈ ಸರ್ಕಾರ ಇದ್ದರೆಷ್ಟು, ಬಿಟ್ಟರೆಷ್ಟು ಎಂದು ವಾಗ್ದಾಳಿ ನಡೆಸಿದರು.
ನಾವು ಎಸ್‍ಡಿಆರ್‍ಎಫ್ ಪರಿಹಾರ ಜೊತೆಗೆ ರಾಜ್ಯ ಸರ್ಕಾರದಿಂದಲೂ ಪರಿಹಾರ ನೀಡಿದ್ದೇವೆ. 5 ಲಕ್ಷ ರೂ. ಪರಿಹಾರ ನೀಡಿ ಸಂತ್ರಸ್ತರಿಗೆ ಮನೆ ನಿರ್ಮಿಸಲು ಅನುಕೂಲ ಮಾಡಿದ್ದೇವೆ. ಬಿಎಸ್‍ವೈ ನೇತೃತ್ವದಲ್ಲಿ ತೀರ್ಮಾನ ತೆಗೆದುಕೊಂಡು ಈ ಕ್ರಮ ಕೈಗೊಂಡಿದ್ದೇವೆ. ಪೂರ್ಣ ಬಿದ್ದ ಮನೆಗಳಿಗೆ 5 ಲಕ್ಷ ರೂ., ಅಲ್ಪ ಬಿದ್ದ ಮನೆಗಳಿಗೆ 3 ಲಕ್ಷ ರೂ. ಪರಿಹಾರ ಕೊಟ್ಟಿದ್ದೇವೆ. ಸಂಕಷ್ಟದಲ್ಲಿರುವ ಪ್ರವಾಹ ಪೀಡಿತರ ನೆರವಿಗೆ ನಮ್ಮ ಸರ್ಕಾರ ಶ್ರಮಿಸಿತ್ತು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಆಸ್ಪತ್ರೆಯಲ್ಲಿ ಬೆಂಕಿ ಅವಘಡ – 125 ರೋಗಿಗಳ ಸ್ಥಳಾಂತರ
Web Stories