– ಕಾಂಗ್ರೆಸ್‍ನಲ್ಲಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಯಾಗಲು ಯಾರೂ ತಯಾರಿಲ್ಲ
ಹಾವೇರಿ: ಲೋಕಸಭಾ ಚುನಾವಣೆಗೆ (Lok Sabha Elections 2024) ಕಾಂಗ್ರೆಸ್‍ನಿಂದ (Congress) ಸ್ಪರ್ಧಿಸಲು ಯಾರೂ ತಯಾರಿಲ್ಲ. ಪ್ರಧಾನಿ ಮೋದಿ ಹೊಡೆತಕ್ಕೆ ನಾವು ಎಲ್ಲಿ ಸಿಲುಕಿ ಸಾಯೋಣ ಎಂದು ಒಬ್ಬ ಮಂತ್ರಿ ನನ್ನ ಬಳಿ ಹೇಳುತ್ತಿದ್ದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
Advertisement
ಹಾವೇರಿಯಲ್ಲಿ (Haveri) ನೂತನ ಬಿಜೆಪಿ (BJP) ಜಿಲ್ಲಾಧ್ಯಕ್ಷ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತಾಡಿದ ಅವರು, ಇಲ್ಲಿಯೂ ಒಬ್ಬ ಮಂತ್ರಿಗೆ ಅಭ್ಯರ್ಥಿ ಆಗಿ ಎಂದು ಕಾಂಗ್ರೆಸ್‍ನವರು ಹೇಳಿದ್ದಾರೆ. ಇಲ್ಲಿ ಯಾರೂ ಸ್ಪರ್ಧಿಸಲು ತಯಾರಿಲ್ಲ. ಮತ ಕೇಳುವ ನೈತಿಕ ಹಕ್ಕು ಬಿಜೆಪಿಗೆ ಮಾತ್ರ ಇದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್: ನಳಿನ್ ಕುಮಾರ್ ಕಟೀಲ್
Advertisement
Advertisement
ನಮ್ಮ ಎಲ್ಲಾ ಯೋಜನೆಗಳನ್ನು ಕಾಂಗ್ರೆಸ್‍ನವರು ನಿಲ್ಲಿಸಿದರು. ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆ. ಗ್ಯಾರಂಟಿಗಳು ಯಾರಿಗೂ ಮುಟ್ಟಿಲ್ಲ. ನಾನು ಸಿಎಂ ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡ್ತೀನಿ. 200 ಯುನಿಟ್ ಫ್ರೀ ಕರೆಂಟ್ ಯಾರಿಗೆ ಕೊಟ್ಟಿದ್ದೀರಿ? ಅವರ ಹೆಸರು ಕೊಡಿ. ಫಲಾನುಭವಿಗಳ ಹೆಸರುಗಳನ್ನು ಬಿಡುಗಡೆ ಮಾಡಿ. ಜನತೆಗೆ ಮೋಸ ಮಾಡಲು ಹೊರಟಿದ್ದೀರಿ. ಇವರು ಒಂದು ಕಾಳು ಅಕ್ಕಿ ಇವರು ಕೊಟ್ಟಿಲ್ಲ. ಕೊಟ್ಟಿರುವುದು ಮೋದಿ ಅಕ್ಕಿ. ರಾಜ್ಯ ಸರ್ಕಾರ, ಮೋದಿ ಸರ್ಕಾರದ ಋಣದಲ್ಲಿದೆ ಎಂದಿದ್ದಾರೆ.
Advertisement
ಲೋಕಸಭಾ ಚುನಾವಣೆಯಲ್ಲಿ 28ಕ್ಕೆ 28 ಕ್ಷೇತ್ರ ಗೆಲ್ಲಿಸಿ, ಚುನಾವಣೆ ಬಳಿಕ ಕೇವಲ ಎರಡ್ಮೂರು ತಿಂಗಳಲ್ಲಿ ಈ ದರಿದ್ರ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗಲಿದೆ. ಈ ಬಗ್ಗೆ ನಾನು ಗ್ಯಾರಂಟಿ ಕೊಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಳಿಕ ಗ್ಯಾರಂಟಿ ರದ್ದತಿಗೆ ಕಾಂಗ್ರೆಸ್‍ನಲ್ಲಿ ಚರ್ಚೆ, ಬಾಲಕೃಷ್ಣರಿಂದ ಬಯಲು: ಹೆಚ್‍ಡಿಕೆ