ಹುಬ್ಬಳ್ಳಿ: ನಾನು ಜೇನು ನೊಣಗಳಿಂದ ಕಚ್ಚಿಸಿಕೊಂಡರೂ, ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರ 30 ವರ್ಷಗಳಿಂದ ಇತ್ತು. ಆದರೆ ಕಾಂಗ್ರೆಸ್‌ನವರು (Congress) ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಇದರ ಬಗ್ಗೆ ಅಧ್ಯಯನ ಮಾಡಿ ಸಚಿವ ಸಂಪುಟ ಉಪ ಸಮಿತಿ ರಚಿಸಿ ಕಾನೂನು ಪ್ರಕಾರ ಮಾಡಿದ್ದೇವೆ. ನಾವು ಮಾಡಲು ಆಗದ್ದನ್ನು ಬಿಜೆಪಿಯವರು (BJP) ಮಾಡಿದ್ದಾರೆ ಅಂತ ಹತಾಶೆಯಿಂದ ಮಾತನಾಡುತ್ತಿದ್ದಾರೆ ಅದ್ಯಾವುದಕ್ಕೂ ಬೆಲೆ ಇಲ್ಲ ಎಂದರು.
ಪ್ರತಿಪಕ್ಷಗಳು ಯಾವಾಗಲೂ ಎಸ್ಸಿ, ಎಸ್ಟಿ ಸಮುದಾಯದವರನ್ನು ಯಾಮಾರಿಸಿಕೊಂಡೇ ಬಂದಿದ್ದರು. ಹೇಳಿಕೆಗಳ ಮೂಲಕ ಸಹಾನುಭೂತಿ ತೋರಿಸಿ ಈ ಚುನಾವಣೆಯಲ್ಲಿಯೂ ಯಾಮಾರಿಸಬಹುದು ಎಂದುಕೊಂಡಿದ್ದರು. ಸಾಮಾಜಿಕ, ಅಭಿವೃದ್ಧಿ ವಿಚಾರದಲ್ಲಿ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಹಲವಾರು ತೀರ್ಮಾನ ಮಾಡಿದ್ದೇವೆ. ನಿರ್ಣಾಯಕ ತೀರ್ಮಾನ ಕೈಗೊಳ್ಳಲು ನಮ್ಮ ಬದ್ಧತೆ ಕಾರಣ. ಆ ಜನಾಂಗಕ್ಕೆ ನ್ಯಾಯ ಕೊಡಿಸುವವರೆಗೂ ವಿಶ್ರಮಿಸಲ್ಲ ಎಂದು ತಿಳಿಸಿದರು.
ಮುಸ್ಲಿಮರನ್ನು ಇಡಬ್ಲ್ಯುಎಸ್ ಸೇರ್ಪಡೆ ಮಾಡಿರುವ ವಿಚಾರವಾಗಿ ಮಾತನಾಡಿದ ಅವರು, ಮೊದಲು ಶೇ.4 ಮೀಸಲಾತಿ ಇತ್ತು. ಈಗ ಶೇ. 10ರಷ್ಟು ಮೀಸಲಾತಿ ಇರುವ ಕಡೆ ಹಾಕಿದ್ದೇವೆ. ಅದು ಹೇಗೆ ಅನ್ಯಾಯ ಆಗುತ್ತೆ? ಅಲ್ಪಸಂಖ್ಯಾತರ ಹಿತರಕ್ಷಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಾಮುಂಡೇಶ್ವರಿ ಉಪ ಚುನಾವಣೆ ನೆನೆದರೆ ಈಗಲೂ ಬೆಚ್ಚುತ್ತಾರೆ ಸಿದ್ದು!
ಮಹಾದಾಯಿ ಯೋಜನೆ ಕಾಮಗಾರಿ ಆರಂಭ ವಿಚಾರವಾಗಿ ಚುನಾವಣಾ ಪ್ರಕ್ರಿಯೆ ಇದಕ್ಕೆ ತೊಡಕಗಲ್ಲ. ನೀತಿ ಸಂಹಿತೆ ಜಾರಿಯಾದ್ರೂ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅಷ್ಟರೊಳಗಾಗಿ ಅರಣ್ಯ ಇಲಾಖೆ ಕ್ಲಿಯರೆನ್ಸ್ ಸಿಗುವ ವಿಶ್ವಾಸವಿದೆ. ಚುನಾವಣೆ ನಂತರ ಕಾಮಗಾರಿ ಆರಂಭವಾಗುತ್ತದೆ. ಚುನಾವಣೆ ಘೋಷಣೆ ಆದ ನಂತರವೇ ಬಿಜೆಪಿ ಪಟ್ಟಿ ಬಿಡುಗಡೆಯಾಗುತ್ತದೆ. ಸರಿಯಾದ ಸಮಯದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ ಎಂದರು. ಇದನ್ನೂ ಓದಿ: SSLC ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ BMTC