ಬೆಂಗಳೂರು: ರೈತರ ಹಿತಾಸಕ್ತಿ ಕಾಪಾಡುವುದು ಮತ್ತು ಅವರ ಹಕ್ಕನ್ನು ಕೊಡಿಸುವುದರಲ್ಲಿಯೇ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದು ನಾನು ನಂಬಿದ್ದೇನೆ. ಅದಕ್ಕಾಗಿ ಸದಾ ನಾನು ರೈತರ ಪರ ಧ್ವನಿ ಎತ್ತಲು ಸಿದ್ದನಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ.
ರೈತರ ಪರವಾಗಿ ಅವರ ಹಿತಾಸಕ್ತಿ ಕಾಪಾಡುವುದು ಮತ್ತು ಅವರ ಹಕ್ಕನ್ನು ಕೊಡಿಸುವುದರಲ್ಲಿಯೇ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದು ನಾನು ನಂಬಿದ್ದೇನೆ. ಅದಕ್ಕಾಗಿ ಸದಾ ನಾನು ರೈತರ ಪರ ಧ್ವನಿ ಎತ್ತಲು ಸಿದ್ದನಿದ್ದೇನೆ.
5/5
— Basavaraj S Bommai (@BSBommai) January 6, 2024
Advertisement
ರಾಜಕೀಯ ಅಸ್ತಿತ್ವಕ್ಕಾಗಿ ರಾಜ್ಯ ಸರ್ಕಾರದ ವಿರುದ್ದ ಆರೋಪ ಮಾಡುತ್ತಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಟ್ವೀಟ್ ಮೂಲಕ ರಾಜಕೀಯವಾಗಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಶ್ರೀರಾಮ ನಮ್ಮ ದೇವರು, ಸೀತಾಮಾತೆ ನಮ್ಮ ತಾಯಿ – ಕಾಂಗ್ರೆಸ್ ಸಚಿವ ಸಂತೋಷ್ ಲಾಡ್
Advertisement
ಶೇ 1 % ರಷ್ಟು ಆಗಿಲ್ಲ ಎಂದು ರೈತಾಪಿ ವರ್ಗದವರು ಕೇಳುತ್ತಿದ್ದಾರೆ. ಮಾತಿನಲ್ಲಲ್ಲಾ ಕೃತಿಯಲ್ಲಿ ನಿಮ್ಮ ಬದ್ದತೆ ತೋರಿಸಬೇಕು.
ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಾವು ಕೇವಲ ಎರಡು ತಿಂಗಳಲ್ಲಿ ಎನ್ ಡಿ ಆರ್ ಎಫ್ ನಿಯಮದ ಪ್ರಕಾರ ಒಟ್ಡು 2031 ಕೋಟಿ ನಾವು ಬಿಡುಗಡೆ ಮಾಡಿದ್ದೇವೆ ಹೀಗಾಗಿ ಈ ಪ್ರಶ್ನೆ ಕೇಳುವ ಹಕ್ಕು ನಮಗಿದೆ.
4/5
— Basavaraj S Bommai (@BSBommai) January 6, 2024
Advertisement
ಮುಖ್ಯಮಂತ್ರಿಗಳೇ ತಾವು ಬಿಡುಗಡೆ ಮಾಡಿರುವ 105 ಕೋಟಿ ರೂ. ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ. ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ, ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದು ಹೇಳಿದ್ದಾರೆ.
Advertisement
ಮುಖ್ಯಮಂತ್ರಿ @CMofKarnataka @siddaramaiah ಅವರೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ. ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ, ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ.
1/5
— Basavaraj S Bommai (@BSBommai) January 6, 2024
ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಹಣದ ಬಗ್ಗೆ ನಾವೂ ಕೂಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಆದರೆ ನಿಮ್ಮನ್ನು ಆಯ್ಕೆ ಮಾಡಿ ಅಧಿಕಾರದ ಗದ್ದುಗೆಗೆ ಕುಂದರಿಸಿರುವ ರೈತಾಪಿ ವರ್ಗವನ್ನು ರಕ್ಷಿಸುವಂತದ್ದು, ನಿಮ್ಮ ಕರ್ತವ್ಯ ನೀವು ಕೂಡಲೇ ಸಂಪೂರ್ಣವಾಗಿರುವ ಹಣವನ್ನು ಬಿಡುಗಡೆ ಮಾಡಬೇಕೆಂದು ಆಗ್ರಹ ಮಾಡುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ಸಾಕಷ್ಟು ಕಾಲಹರಣ ಮಾಡಿರುತ್ತೀರಿ. ರಾಜ್ಯದ ಆರ್ಥಿಕ ಸ್ಥಿತಿ ಉತ್ತಮ ಇದೆ ಎಂದು ಬೆನ್ನು ತಟ್ಟಿಕೊಳ್ಳುತ್ತಿರುವ ನಿಮ್ಮ ಸರ್ಕಾರ ಯಾಕೆ ರೈತರ ಪರಿಹಾರವನ್ನು ಪೂರ್ಣ ಬಿಡುಗಡೆ ಮಾಡುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ 18,000 ಕೋಟಿ ರೂ. ಬರ ಪರಿಹಾರಕ್ಕೆ ಮನವಿ ಮಾಡಿರುವ ರಾಜ್ಯ ಸರ್ಕಾರ 105 ಕೋಟಿ ರೂ. ಬಿಡುಗಡೆ ಮಾಡಿದ್ದು, 1 % ರಷ್ಟು ಆಗಿಲ್ಲ ಎಂದು ರೈತಾಪಿ ವರ್ಗದವರು ಕೇಳುತ್ತಿದ್ದಾರೆ. ಮಾತಿನಲ್ಲಲ್ಲ ಕೃತಿಯಲ್ಲಿ ನಿಮ್ಮ ಬದ್ದತೆ ತೋರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವ್ರೆ ನಿಮ್ದೇನು ಸರ್ಕಾರನಾ? ಸರ್ವಾಧಿಕಾರನಾ: ಪ್ರಹ್ಲಾದ್ ಜೋಶಿ ಪ್ರಶ್ನೆ
ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ನಾವು ಕೇವಲ ಎರಡು ತಿಂಗಳಲ್ಲಿ ಎನ್ಡಿಆರ್ಎಫ್ ಮಾರ್ಗಸೂಚಿಗಿಂತ ಹೆಚ್ಚು ಒಟ್ಟು 2,031 ಕೋಟಿ ರೂ. ನಾವು ಬಿಡುಗಡೆ ಮಾಡಿದ್ದೇವೆ. ಹೀಗಾಗಿ ಈ ಪ್ರಶ್ನೆ ಕೇಳುವ ಹಕ್ಕು ನಮಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.