ಹುಬ್ಬಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಏನು ಹೇಳಬೇಕೋ ಗೊತ್ತಾಗುತ್ತಿಲ್ಲ, ನಾವು ನೂರು ಕೋಟಿ ಲಸಿಕೆ ಹಾಕಿದ್ದೇವೆ, ಯಾರು ಲಸಿಕೆ ತೆಗೆದುಕೊಂಡಿದ್ದಾರೆ, ಅವರು ಎದ್ದು ನಿಂತು ಹೇಳಬೇಕಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ: 100 ಕೋಟಿ ಕೇವಲ ಅಂಕಿಯಲ್ಲ, ಇತಿಹಾಸದಲ್ಲಿ ದಾಖಲಾದ ಹೊಸ ಅಧ್ಯಾಯ: ಮೋದಿ
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇದನ್ನ ಅವರು ಕೇಳುತ್ತಾರೆ ಅಂತಾನೇ ಮೊದಲೇ ಲಸಿಕೆ ರಜಿಸ್ಟರ್ ಮಾಡಲಾಗುತ್ತಿದೆ. ಉಪಚುನಾವಣೆಯಲ್ಲಿ ಹಣ ಹಂಚಿಕೆ ವಿಚಾರವಾಗಿ ಮಾತನಾಡಿದ ಸಿಎಂ, ಅದು ಸಿದ್ಧರಾಮಯ್ಯನವರ ಅನುಭವ, ಅವರು ನಂಜನಗೂಡು, ಕುಂದಗೋಳ ಹಾಗೂ ಗುಂಡ್ಲುಪೇಟೆಯಲ್ಲಿ ಏನು ಮಾಡಿದ್ದಾರೆ ಎಂದು ಗೊತ್ತಿದೆ ಎಂದರು. ಇನ್ನು ಸಿದ್ಧರಾಮಯ್ಯ ಯಾವಾಗ ಯಾವಾಗ ವಿರೋಧ ಪಕ್ಷದಲ್ಲಿ ಇರುತ್ತಾರೆ, ಈ ಡೈಲಾಗ್ ಅವರಲ್ಲಿ ಫಿಕ್ಸ್ ಎಂದು ಸಿದ್ದರಾಮಯ್ಯ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದ : ಸಿದ್ದರಾಮಯ್ಯ
139 ಕೋಟಿ ಜನರಲ್ಲಿ 68 ಕೋಟಿ ಜನರಿಗೆ ಇನ್ನು ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ. ಯಾವ ಸಾಧನೆಗೆ ಸಂಭ್ರಮಾಚರಣೆ? ಗುರಿ ತಲುಪಲು ಪ್ರತಿದಿನ 1.51 ಕೋಟಿ ಲಸಿಕೆ ನೀಡಬೇಕಾಗಿದೆ ಇದಕ್ಕಾಗಿ ಬೇಕಾಗಿರುವುದು ಸಿದ್ದತೆ, ಖಾಲಿ ತಟ್ಟೆಯ ಪ್ರಚಾರ ಅಲ್ಲ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ.