BidarLatestMain PostPolitical News

ಬೀದರ್‌ಗೆ ಇಂದು ಮುಖ್ಯಮಂತ್ರಿ ಭೇಟಿ

ಬೀದರ್: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ವಿಧಾನ ಪರಿಷತ್ ಚುನಾವಣೆಗಾಗಿ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದಾರೆ.

ಬೀದರ್‌ನ ಘಾಳೆ ಫಂಕ್ಷನ್ ಹಾಲ್‌ನಲ್ಲಿ ನಡೆಯುತ್ತಿರುವ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಪರ ಭಾನುವಾರ ಮತಯಾಚಿಸಲಿದ್ದಾರೆ. ಇದನ್ನೂ ಓದಿ: ಮುಸಲ್ಮಾನರೇ ಕಾಂಗ್ರೆಸ್ ಕೈ ಹಿಡಿಯಬೇಕು: ಈಶ್ವರಪ್ಪ

ಇಂದು ಮಧ್ಯಾಹ್ನ 2:30ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಸಿಎಂ 3:45ಕ್ಕೆ ಬೀದರ್‌ಗೆ ಆಗಮಿಸಲ್ಲಿದ್ದಾರೆ. ಇಂದು ಬೀದರ್‌ನಲ್ಲೆ ವ್ಯಾಸ್ತವ್ಯ ಹೂಡಿ ಡಿ.6ರಂದು ಬೆಳಗ್ಗೆ 9 ಗಂಟೆಗೆ ಡಾ. ಬಿ.ಆರ್.ಅಂಬೇಡ್ಕರ್ ಅವರ 65ನೇ ಪುಣ್ಯಸ್ಮರಣೆ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಬೀದರ್‌ನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಮಾಡಲಿದ್ದಾರೆ. ಇದನ್ನೂ ಓದಿ: ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್

ಕೇಂದ್ರ ಸಚಿವ ಭಗವಂತ್ ಖೂಬಾ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಬಿಜೆಪಿ ನಾಯಕರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Leave a Reply

Your email address will not be published.

Back to top button