LatestMain PostNational

2023ರ ವರೆಗೂ ಬೊಮ್ಮಾಯಿ ಸಿಎಂ ಆಗಿ ಮುಂದುವರಿಯಲಿದ್ದಾರೆ: ಪ್ರಹ್ಲಾದ್ ಜೋಶಿ

ನವದೆಹಲಿ: ಮುಂದಿನ ಚುನಾವಣೆವರೆಗೂ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಶಿಗ್ಗಾಂವ್‍ನಲ್ಲಿ ಬಸವರಾಜ ಬೊಮ್ಮಾಯಿ ಅವರ ಭಾವನಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬೊಮ್ಮಾಯಿ ಇದೇ ಮೊದಲ ಬಾರಿಗೆ ಹೀಗೆ ಮಾತನಾಡುತ್ತಿಲ್ಲ, ಅವರು ಹೀಗೆ ಫಿಲಾಸಫಿಕಲ್ ಆಗಿ ಮಾತನಾಡಿದ್ದಾರೆ. ಇದನ್ನು ನಾನೇ ಹತ್ತಾರು ಬಾರಿ ನೋಡಿದ್ದೇನೆ. ಇದಕ್ಕೆ ಮುಖ್ಯಮಂತ್ರಿ ಬದಲಾವಣೆ ಎಂದು ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ಮಟ್ಟದಲ್ಲೂ ಯಾವುದೇ ಚರ್ಚೆಗಳು ನಡೆದಿಲ್ಲ. ಆ ಪ್ರಸ್ತಾಪವೂ ಇಲ್ಲ. ಬೊಮ್ಮಾಯಿ ವಿದೇಶಕ್ಕೆ ತೆರಳುತ್ತಿರುವ ಬಗ್ಗೆ ಯಾವುದೇ ಮಾಹಿತಿ ನನಗಿಲ್ಲ ಎಂದು ಜೋಶಿ ಹೇಳಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

Leave a Reply

Your email address will not be published.

Back to top button