BelgaumDistrictsKarnatakaLatestMain Post

ಬೊಮ್ಮಾಯಿ 1 ತಿಂಗಳಲ್ಲಿ ತಮ್ಮ ಅಸ್ತಿತ್ವ ಕಳೆದುಕೊಳ್ಳಲಿದ್ದಾರೆ ನಮ್ಮ ಶಾಪ ತಟ್ಟದೇ ಇರಲ್ಲ: ಬಸವಪ್ರಕಾಶ ಸ್ವಾಮೀಜಿ

ಬೆಳಗಾವಿ: ಮುಂಬರುವ ಒಂದು ತಿಂಗಳ ಅವಧಿಯಲ್ಲಿ ಬಸವರಾಜ ಬೊಮ್ಮಾಯಿಯವರ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ. ಸರ್ಕಾರ ಪೊಲೀಸರನ್ನು ಬಿಟ್ಟು ಖಾವಿ ಕುಲಕ್ಕೆ ಅವಮಾನ ಮಾಡಿದೆ ಎಂದು ಕೂಡಲ ಸಂಗಮ ಬಸವ ಧರ್ಮ ಪೀಠದ ಬಸವಪ್ರಕಾಶ ಸ್ವಾಮೀಜಿ ಹಾಗೂ ದಯಾನಂದ ಸ್ವಾಮಿಜಿಗಳು ಸಿಎಂಗೆ ಶಾಪ ಹಾಕಿದ್ದಾರೆ.

ಸುವರ್ಣ ಗಾರ್ಡನ್ ಟೆಂಟ್ ಬಳಿ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಕೈಬಿಡಬೇಕೆಂದು ಬಸವ ದಳ, ಸಸ್ಯಹಾರಿ ಸಂಘಟನೆ ಒಕ್ಕೂಟದಿಂದ ಪ್ರತಿಭಟನೆ ಮಾಡಲಾಯಿತು. ಅನೇಕ ಸ್ವಾಮಿಜಿಗಳು, ಮಾತೆಯರು ಸರ್ಕಾರದ ನಿರ್ಧಾರ ವಿರುದ್ಧ ಪ್ರತಿಭಟಿಸಿದರು. ಬೆಳಗ್ಗೆಯಿಂದ ಸಾಯಂಕಾಲವರೆಗೆ ಟೆಂಟ್ ಬಳಿ ಯಾರೂ ಬರಲಿಲ್ಲ. ನಮ್ಮ ಆಹ್ವಾಲು ಸ್ವೀಕರಿಸಲಿಲ್ಲ ಎಂದು ಆಕ್ರೋಶಕ್ಕೊಳಗಾದರು. ಈ ಸಂದರ್ಭದಲ್ಲಿ ಸುವರ್ಣ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಹೊರಟರು. ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆಯಲು ಮುಂದಾದರು. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಇದನ್ನೂ ಓದಿ: ಈ ಬದುಕು ಶಾಶ್ವತವಲ್ಲ, ನಾವು ಎಷ್ಟು ದಿನ ಇರ್ತೇವೆ ಅದು ಗೊತ್ತಿಲ್ಲ: ಸಿಎಂ ವೈರಾಗ್ಯದ ಮಾತು

ಈ ವೇಳೆ ಆಕ್ರೋಶಗೊಂಡ ಬಸವಪ್ರಕಾಶ ಸ್ವಾಮೀಜಿ ಹಾಗೂ ದಯಾನಂದ ಸ್ವಾಮೀಜಿ ಸರ್ಕಾರದ ವಿರುದ್ಧ ಹರಿಹಾಯ್ದ ಶಾಪ ಹಾಕಿದರು. ಈ ಅನ್ಯಾಯವನ್ನು ಲಿಂಗಾಯತ ಸಮುದಾಯ ಸಹಿಸಿಕೊಳ್ಳುವುದಿಲ್ಲ ಸ್ವಾಮೀಜಿಗಳನ್ನು, ಲಿಂಗನಿಷ್ಠರನ್ನು ಪೊಲೀಸರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ನಾವೆಲ್ಲರೂ ಎಲ್ಲವನ್ನು ಬಿಟ್ಟ ಬಂದ್ಮೇಲೆ ಪೊಲೀಸರು ಅಕ್ಕ, ತಂಗಿ, ತಾಯಿ ಪದ ಬಳಕೆ ಮಾಡಿ ಬೈಯುವುದು ಅಷ್ಟೊಂದು ಸಮಂಜಸವಲ್ಲ ಎಂದು ಸ್ವಾಮಿಜಿಗಳು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಂಇಎಸ್ ಪುಂಡಾಟಿಕೆ ಹಿಂದೆ ಕಾಂಗ್ರೆಸ್ ಇದೆ – ಡಿಕೆಶಿ ವಿರುದ್ಧ ಸಿ.ಟಿ.ರವಿ ಆಕ್ರೋಶ

ನಾವು ಸುವರ್ಣಸೌಧಕ್ಕೆ ಹೋಗುವ ಸಂದರ್ಭದಲ್ಲಿ ಪೊಲೀಸರು ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದರು. ಹಿಗ್ಗಾಮುಗ್ಗಾ ಬೈದಿದ್ದಾರೆ. ನಮಗೆ ನ್ಯಾಯ ಸಿಗಬೇಕು. ನಮ್ಮಂತ ಸ್ವಾಮೀಜಿಗಳಿಗೆ ಈ ರೀತಿ ಆದರೆ ನಮ್ಮ ಶಾಪ ಅವರಿಗೆ ತಟ್ಟದೆ ಬಿಡುವುದಿಲ್ಲ. ನಮ್ಮ ಶಾಪ ತಟ್ಟಿಯೇ ತಟ್ಟುತ್ತದೆ. ಖಂಡಿತಾ ಅವರು ಒಂದು ತಿಂಗಳಲ್ಲಿ ಅಧಿಕಾರದಿಂದ ಕೆಳಗೆ ಇಳಿಯಲಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಭಾವನಾತ್ಮಕ ಹೇಳಿಕೆ ಹೃದಯ ಇದ್ದವರಿಗೆ ಮಾತ್ರ ಅರ್ಥವಾಗುತ್ತದೆ: ಎಚ್‍ಡಿಕೆ

Leave a Reply

Your email address will not be published.

Back to top button