ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳಿದ್ದಾರೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ಗೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಳೆ ನವದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ಇತ್ತೀಚೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಪರಿಷತ್ ಹಾಗೂ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿತ್ತು. ಇದನ್ನು ಪರಾಮರ್ಶಿಸಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಾಳೆ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
Advertisement
Advertisement
ಇದೇ ಮೊದಲ ಬಾರಿಗೆ ಕೇಂದ್ರ ಚುನಾವಣಾ ಸಮಿತಿ ರಾಜ್ಯ ನಾಯಕರನ್ನು ಈ ಸಭೆಗೆ ಆಹ್ವಾನಿಸಿದೆ. ಕೊನೆ ಕ್ಷಣದ ಅಭಿಪ್ರಾಯ ಸಂಗ್ರಹಿಸಿ ಅಂತಿಮ ಪಟ್ಟಿ ಬಿಡುಗಡೆ ಮಾಡಲು ವರಿಷ್ಠರು ನಿರ್ಧರಿಸಿದ್ದಾರೆ.
Advertisement
ಸಿಎಂ ದೆಹಲಿ ಭೇಟಿ ವೇಳೆ ನೆನೆಗುದಿಗೆ ಬಿದ್ದಿರುವ ಸಂಪುಟ ಪುನಾರಚನೆ ಕುರಿತಂತೆ ವರಿಷ್ಠರ ಜೊತೆ ಸಮಾಲೋಚನೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ 2 ಸುತ್ತಿನ ಚರ್ಚೆ ನಡೆದಿದ್ದು, ಹೈಕಮಾಂಡ್ ಗ್ರೀನ್ ಸಿಗ್ನಲ್‌ಗಾಗಿ ಸಿಎಂ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಆದರೆ ಇನ್ನೂ ವರಿಷ್ಠರಿಂದ ಯಾವುದೇ ಸೂಚನೆ ಬರದ ಹಿನ್ನೆಲೆಯಲ್ಲಿ ಕೊನೆಯ ಪ್ರಯತ್ನವಾಗಿ ದೆಹಲಿ ಭೇಟಿ ಮತ್ತೊಮ್ಮೆ ಚರ್ಚೆಗೆ ಅವಕಾಶ ಪಡೆಯಲು ಯತ್ನಿಸಲಿದ್ದಾರೆ. ಇದನ್ನೂ ಓದಿ: 2030ರ ವೇಳೆಗೆ ಭಾರತಕ್ಕೆ 6ಜಿ ನೆಟ್‌ವರ್ಕ್ – ಪ್ರಧಾನಿ ಮೋದಿ